ಕುಂದಾಪುರ:ಭಾರತೀಯ ಭೂ ಸೇನೆಯಲ್ಲಿ ಸಿಪಾಯಿ ಹುದ್ದೆಗೆ ಸೇರಿ ಹವಾಲ್ದಾರರಾಗಿ ನಿವೃತ್ತಿ ಹೊಂದಿರುವ ಆಲೂರು ಗ್ರಾಮದ ನಿವಾಸಿ ದಿನೇಶ್ ಆಚಾರ್ಯ ಅವರನ್ನು ಅವರ ತಂದೆ ತಾಯಿಯೊಂದಿಗೆ ಆಲೂರು-ಹರ್ಕೂರು ಗ್ರಾಮಸ್ಥರ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಆಲೂರು ಗ್ರಾ.ಪಂ ಅಧ್ಯಕ್ಷ ರಾಜೇಶ್ ಎನ್ ದೇವಾಡಿಗ,ಮಾಜಿ ಉಪಾಧ್ಯಕ್ಷ ರವಿ ಶೆಟ್ಟಿ ಆಲೂರು ಮತ್ತು ಸದಸ್ಯರು,ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮಂಜಯ್ಯ ಶೆಟ್ಟಿ,ಬಾಂಧವ್ಯ ಬಳಗದ ಸುಧಾಕರ ಪೂಜಾರಿ ಮತ್ತು ಸದಸ್ಯರು,ಸ್ಥಳೀಯರು,ಉಪಸ್ಥಿತರಿದ್ದರು.
೨೧ ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ನಿವೃತ್ತ ಸೇನಾ ಹವಾಲ್ದಾರ್ ದಿನೇಶ್ ಆಚಾರ್ಯ ಅವರನ್ನು ಮುಳ್ಳಿಕಟ್ಟೆ ಯಿಂದ ಆಲೂರು ತನಕ ಮೆರವಣಿಗೆಯಲ್ಲಿ ಚಂಡೆಯೊAದಿಗೆ ಬರಮಾಡಿಕೊಳ್ಳಲಾಯಿತು.ಆಲೂರು ಗ್ರಾಮ ಪಂಚಾಯತ್ ಮತ್ತು ಬಂಟ್ವಾಡಿ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ನಿವೃತ್ತ ಸೈನಿಕರಿಗೆ ಗೌರವನ್ನು ಸಲ್ಲಿಸಿದರು.ದಾರಿ ಉದ್ದಕ್ಕೂ ಸಾರ್ವಜನಿಕರು ಜೈ ಘೋಷ ಕೂಗಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…