ಕುಂದಾಪುರ:ಮಾರಿಕಾಂಬಾ ಮಹಿಳಾ ಸಹಕಾರ ಸಂಘ ಕೊಡಪಾಡಿ-ಗುಜ್ಜಾಡಿ ಅದರ 7ನೇ ವಾರ್ಷಿಕ ಮಹಾಸಭೆ ತ್ರಾಸಿ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು.ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಮಾತನಾಡಿ,ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡುವುದರ ಜತೆಗೆ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಪಡೆದು ಕೊಳ್ಳಲು ಸಂಘದ ಸದಸ್ಯರಿಗೆ ಮಾಹಿತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಕುರಿತು ಕ್ರೀಯಾ ಯೋಜನೆ ರೂಪಿಸಲಾಗಿದೆ ಎಂದರು.ಸಂಘದ ಉಪಾಧ್ಯಕ್ಷೆ ರತ್ನ ಟಿ ದೇವಾಡಿಗ,ನಿರ್ದೇಶಕರಾದ ವಿಜಯ ಬಿ,ಸುರೇಖಾ ಕಾನೋಜಿ,ಮಹಾಲಕ್ಷಿ,ಶಾಂತಾ,ರೇಖಾ ಖಾರ್ವಿ,ಲಲಿತಾ ಖಾರ್ವಿ,ಶ್ಯಾಮಲಾ ದೇವಿ,ಶಾಂತಿ ಖಾರ್ವಿ,ಸುನೀತಾ ಪೂಜಾರಿ,ಶಾಂತಾ ಮರಾಠಿ ಉಪಸ್ಥಿತರಿದ್ದರು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಸ್ವಾಮಿಲಿಂಗೇಶ್ವರ ಅವರು 2022-23ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ ಮಂಡಿಸಿದರು.ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.ಸಿಬ್ಬಂದಿ ಶ್ರೀಲವಿ ಸ್ವಾಗತಿಸಿದರು.ಸದಸ್ಯೆ ಜಿ ರೇಣುಕಾ ಸೇರುಗಾರ್ ವಂದಿಸಿದರು.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…