ಹೆಮ್ಮಾಡಿ ಜನತಾ ಕಾಲೇಜಿನ ಬಾಲಕಿಯರ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ:ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆರ್.ಎನ್.ಎಸ್ ಪದವಿ ಪೂರ್ವ ಕಾಲೇಜು ಕುಂದಾಪುರ ಅವರ ಸಹಯೋಗದೊಂದಿಗೆ ಕುಂದಾಪುರದಲ್ಲಿ ನಡೆದ ತಾಲೂಕು ಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು,ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.





















































































































































































































































































































































































































































































































































































































































































































































































































































































































































































































































































































































































































































































































































































































































































