ಬೈಂದೂರು:ಸಮಗ್ರ ಬೈಂದೂರು ಅಭಿವೃದ್ಧಿ ಕುರಿತು ಹಾಗೂ ಪ್ರಗತಿ ಪರಿಶೀಲನಾ ಸಭೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರ ನೇತೃತ್ವದಲ್ಲಿ ಶಾಸಕರ ಕಛೇರಿಯಲ್ಲಿ ಸೋಮವಾರ ನಡೆಯಿತು.ಬೈಂದೂರು ಕ್ಷೇತ್ರಕ್ಕೆ ಭೇಟಿ ನೀಡಿದ ಸಂಸದರು ಶಾಸಕರುಗಳು ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಹಾಗೂ ಮನೆ ಮನೆಗೆ ಶುದ್ದ ಕುಡಿಯುವ ನೀರಿನ ಯೋಜನೆ,ಮರವಂತೆ ಹೊರಬಂದರು ಹಾಗೂ ಗಂಗೊಳ್ಳಿ ಜಟ್ಟಿ ಅಭಿವೃದ್ಧಿ, ತ್ರಾಸಿ- ಮರವಂತೆ ಮತ್ತು ಸೋಮೇಶ್ವರ ಬೀಚ್ ಅಭಿವೃದ್ಧಿ,ಗೋಮಾಳಗಳ ಅಳತೆ ಜೊತೆಗೆ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು.ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ,ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ,ಸುರೇಶ್ ಶೆಟ್ಟಿ ಉಪ್ಪುಂದ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ,ವಿವಿಧ ಇಲಾಖೆ ಅಧಿಕಾರಿಗಳು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಬೈಂದೂರು – ಉಪ್ಪುಂದದಲ್ಲಿರುವ ಕಾರ್ಯಕರ್ತ ಕಛೇರಿಗೆ ಭೇಟಿ ನೀಡಿದ ಸಂಸದ ಬಿ.ವೈ ರಾಘವೇಂದ್ರ ಅವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕಾರ ಮಾಡಿದರು.ಈ ಸಂದರ್ಭದಲ್ಲಿ ವಿಕಲ ಚೇತನರಿಗೆ ವಿದ್ಯುತ್ ಚಾಲಿತ ವೀಲ್ ಚೇರ್ ಅನ್ನು ಹಸ್ತಾಂತರಿಸಿದರು.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…