ಕುಂದಾಪುರ:ಬೈಂದೂರು ವಿಧಾನಸಭೆ ಕ್ಷೇತ್ರದ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಮೊವಾಡಿ ಸರಕಾರಿ ಹಾಡಿಯಲ್ಲಿ ಇಸ್ಪೀಟು ಜುಗಾರಿ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್‍ಐ ಹರೀಶ್ ಆರ್ ನಾಯ್ಕ್ ಮತ್ತು ಸಿಬ್ಬಂದಿಗಳ ತಂಡ ಆಪಾದಿತರಾದ ಪ್ರಕಾಶ್ (30),ಪ್ರದೀಪ (42),ವಿಲ್ಫ್ರೆಡ್ (29),ಸಿದ್ದ (37),ಬಾಬು (60) ಎಂಬವರನ್ನು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ.
ಮೊವಾಡಿ ಸರಕಾರಿ ಹಾಡಿಯಲ್ಲಿ ಇಸ್ಪೀಟು ಜುಗಾರಿ ನಡೆಯುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು ಆಪಾದಿತರು ಸಹಿತ ಜುಗಾರಿ ಕೃತ್ಯಕ್ಕೆ ಬಳಸಿದ 65,000.ರೂ ನಗದು,ಇಸ್ಪೀಟ್ ಎಲೆಗಳು 52,ನೀಲಿ ಬಣ್ಣದ ಟಾರ್ಪಲ್ 01 ಅನ್ನು ವಶಕ್ಕೆ ಪಡೆಯಲಾಗಿದೆ.ಈ ಸಂಬಂಧ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…