ಕುಂದಾಪುರ

ಎಂಎಲ್‌ಎ ಟಿಕೆಟ್ ಕೊಡಿಸುದಾಗಿ ವಂಚನೆ:ಚೈತ್ರಾ ಕುಂದಾಪುರ ಅರೆಸ್ಟ್

Share

ಬೈಂದೂರು:2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬೈಂದೂರು ಕ್ಷೇತ್ರದ ಟಿಕೆಟ್ ಕೊಡಿಸುದಾಗಿ ಸಮಾಜ ಸೇವಕ ಉದ್ಯಮಿ ಗೋವಿಂದ ಬಾಬು ಪೂಜಾರಿ ಎನ್ನುವ ವ್ಯಕ್ತಿಯೊಬ್ಬರಿಗೆ ಬರೊಬ್ಬರಿ 7. ಕೋಟಿ.ರೂ ವಂಚನೆ ಮಾಡಿರುವ ಪ್ರಕರಣದಡಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬಂಧಿಸಲಾಗಿದೆ.

ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಡೆಯುತ್ತಿದ್ದ ರಾಜಕೀಯ ಬೆಳವಣಿಗೆಯ ಲಾಭಾಂಶವನ್ನು ಬಳಸಿಕೊಳ್ಳಲು ಮುಂದಾಗಿದ್ದ ಚೈತ್ರ ಕುಂದಾಪುರ ಮತ್ತು ತಂಡ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿ ಅವರಿಗೆ ಸುಳ್ಳು ಭರವಸೆಗಳನ್ನು ನೀಡಿ ಬೈಂದೂರು ಕ್ಷೇತ್ರದ ಟಿಕೆಟ್ ಕೊಡಿಸುದಾಗಿ ನಂಬಿಸಿ 7.ಕೋಟಿ.ರೂ ವಂಚಿಸಿದ್ದಾರೆ.ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ತಲೆ ಮರೆಸಿಕೊಂಡಿದ ಚೈತ್ರಾ ಕುಂದಾಪುರ ಮತ್ತು ತಂಡದವರನ್ನು ಬಂಧಿಸುವಲ್ಲಿ ಬೆಂಗಳೂರಿನ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೊದಲನೇ ಆರೋಪಿಗಳಾದ ಚೈತ್ರಾ ಕುಂದಾಪುರ,ಗಗನ್ ಕಡೂರು,ಶ್ರೀಕಾಂತ್ ನಾಯಕ್ ಪೆಲತ್ತೂರು,ರಮೇಶ್ ಧನರಾಜ್ ಎಂಬ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಪ್ರಕರಣದಲ್ಲಿ ಭಾಗಿಯಾಗಿರುವ ಹಾಲಶ್ರೀ ಸ್ವಾಮೀಜಿ,ನಾಯ್ಕ್ ಎಂಬಾತನಿಗೆ ಪೊಲೀಸರು ಬಲೆ ಬಿಸಿದ್ದಾರೆ.ಪ್ರಸಾದ್ ಬೈಂದೂರು ಎಂಬಾತನನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.ಎಂಎಲ್‌ಎ ಟಿಕೆಟ್ ವಂಚನೆ ಪ್ರಕರಣದಲ್ಲಿ 8 ಜನ ಆರೋಪಿಗಳು ಭಾಗಿಯಾಗಿರುವ ವಿಷಯ ಬೆಳಕಿಗೆ ಬಂದಿದ್ದು ತನಿಖೆ ಚುರುಕು ಗೊಂಡಿದೆ,ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರ ಬೀಳಲಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago