ಸೆ.19 ರಂದು ಮಾರಸ್ವಾಮಿ ದೇವಸ್ಥಾನದಲ್ಲಿ ವರಾಹ ಜಯಂತಿ ಕಾರ್ಯಕ್ರಮ
ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕಾಲಂಪ್ರತಿ ನಡೆಯುವ ವರಾಹ ಜಯಂತಿ ಕಾರ್ಯಕ್ರಮ ಸೆ.19 ರಂದು ಮಂಗಳವಾರ ನಡೆಯಲಿದೆ.ವರಾಹ ಜಯಂತಿ ಕಾರ್ಯಕ್ರಮದ ಪ್ರಯುಕ್ತ ವರಾಹ ಹೋಮ,ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ,ಸಂಜೆ ಭಜನಾ ಕಾರ್ಯಕ್ರಮ ಜರುಗಲಿದೆ ಎಂದು ದೇವಳದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.











































































































































































































































































































































































































































































































































































































































































































































































































































































































































































































































































































































































































































































































































































































































































