ಕುಂದಾಪುರ:ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ,ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಅವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಶನಿವಾರ ನಡೆಯಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ,ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಸ್ಥಿರ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿ ಆಗುತ್ತದೆ ಎಂದು ಹೇಳಿದರು.ಪಾಟ್ನಾ ಪೈರೇಟ್ಸ್ ಪ್ರೆÇೀ ಕಬಡ್ಡಿ ತಂಡದ ಆಟಗಾರ ರಂಜಿತ್ ನಾಯ್ಕ್ ಶುಭಹಾರೈಸಿದರು.ಕಟ್ ಬೇಲ್ತೂರು ಪಂಚಾಯಿತಿ ಅಧ್ಯಕ್ಷೆ ಕು.ವೈಶಾಲಿ,ಜನತಾ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಂಜು ಕಾಳವಾರ,ದೈಹಿಕ ಶಿಕ್ಷಣ ಉಪನ್ಯಾಸಕ ಸಂಘದ ಅಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ,ತಾಲೂಕು ಕ್ರೀಡಾ ಸಂಯೋಜಕ ರಾಮ ಶೆಟ್ಟಿ,ವಿವೇಕ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ವಸಂತ್ ಕುಮಾರ್ ಶೆಟ್ಟಿ,ಜನತಾ ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ ಪೂಜಾರಿ,ಉಪಸ್ಥಿತರಿದ್ದರು.ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರಿನ್ಸಿಪಾಲ್ ಗಣೇಶ ಮೊಗವೀರ ಪ್ರಾಸ್ತಾವಿಕವಾಗಿ ಮಾತನಾಡಿ,ಸ್ವಾಗತಿಸಿದರು.ಉಪನ್ಯಾಸಕ ಉದಯ್ ನಾಯ್ಕ್ ನಿರೂಪಿಸಿದರು.ದೈಹಿಕ ಶಿಕ್ಷಣ ಉಪನ್ಯಾಸಕ ಉಮೇಶ್ ನಾಯ್ಕ್ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…