ಕುಂದಾಪುರ

ಶ್ರೀಗಣೇಶ ಕ್ರೆಡಿಟ್ ಸೊಸೈಟಿ ವಾರ್ಷಿಕ ಸಾಮಾನ್ಯ ಸಭೆ;10% ಡಿವಿಡೆಂಟ್ ಘೋಷಣೆ

Share

(ನಾಲ್ಕು ಜನ ಪ್ರಗತಿಪರ ಕೃಷಿಕರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು)

ಕುಂದಾಪುರ:ಗ್ರಾಮೀಣ ಪ್ರದೇಶದ ಸ್ತ್ರೀ ಸಾಮಾನ್ಯರು ಮತ್ತು ಕೃಷಿಕರ ಶ್ರೇಯೋಭಿವೃದ್ಧಿಗಾಗಿ ಸಂಘವು ಕಳೆದ ಏಳು ವರ್ಷಗಳಿಂದ ಕೆಲಸವನ್ನು ಮಾಡಿಕೊಂಡು ಬರುತ್ತಿದೆ.ಸಂಘದ ಸದಸ್ಯರಿಗಾಗಿ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಣೆ ಮತ್ತು ಅಗತ್ಯ ಮಾಹಿತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ.ಸದಸ್ಯರು ಆಡಳಿತ ಮಂಡಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ಕಾಲ ಕಾಲಕ್ಕೆ ನೀಡುವುದರ ಮುಖೇನ ಸಂಘದ ಬೆಳವಣಿಗೆಗೆ ಸಹಕರಿಸಬೇಕೆಂದು ಶ್ರೀಗಣೇಶ ಸೊಸೈಟಿ ಅಧ್ಯಕ್ಷ ಮುರಳೀಧರ ಐತಾಳ್ ಹೇಳಿದರು.
ಹೊಸಾಡು ಸ.ಹಿ.ಪ್ರಾ ಶಾಲೆಯಲ್ಲಿ ಭಾನುವಾರ ನಡೆದ ಶ್ರೀಗಣೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮುಳ್ಳಿಕಟ್ಟೆ ಹೊಸಾಡು ಅದರ 2022-23ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಸಿ ಅವರು ಮಾತನಾಡಿದರು.
2022-23ನೇ ಸಾಲಿನ ಆಡಳಿತ ವರದಿ ಹಾಗೂ ಲೆಕ್ಕ ಪರೀಶೋಧನ ವರದಿಯನ್ನು ಸಂಘದ ಸಿಇಒ ಅಶ್ವಿನಿ ಮಂಡಿಸಿದರು.2023-24ನೇ ಸಾಲಿನ ಲೆಕ್ಕ ಪರಿಶೋಧಕರ ಆಯ್ಕೆ ಹಾಗೂ ಮುಂದಿನ ಕಾರ್ಯಯೋಜನೆಗಳಿಗೆ ಅನುಮತಿ ನೀಡಲಾಯಿತು.ಹಿಂದಿನ ಸಭೆಯ ನಡಾವಳಿಯನ್ನು ಜ್ಯೋತಿ ಐತಾಳ್ ಓದಿದರು.ಸಂಘದ ಸದಸ್ಯ ಮೋಹನದಾಸ ಹೆಬ್ಬಾರ್ ಸಲಹೆ ಸೂಚನೆಗಳನ್ನು ನೀಡಿದರು.ಸಂಘದ ಸದಸ್ಯರಿಗೆ 10% ಡಿವಿಡೆಂಟ್ ಘೋಷಣೆ ಮಾಡಲಾಯಿತು.15 ಬಡ ಕುಟುಂಬದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.ನಾಲ್ಕು ಜನ ಪ್ರಗತಿಪರ ಕೃಷಿಕರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭ ಸಂಘದ ಎಲ್ಲಾ ನಿರ್ದೇಶಕರುಗಳು ಉಪಸ್ಥಿತರಿದ್ದರು.ಸದಸ್ಯರು ಭಾಗವಹಿಸಿದ್ದರು.ಸಲಹೆಗಾರ ವಿಶ್ವಂಭರ ಐತಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು.ರಾಜೇಶ ಸ್ವಾಗತಿಸಿ,ವಂದಿಸಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago