ಕುಂದಾಪುರ:ಆಲೂರು – ಹರ್ಕೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ 30ನೇ ವರ್ಷದ ಗಣೇಶೋತ್ಸವ ಆಚರಣೆ ವಿಜೃಂಭಣೆಯಿಂದ ನಡೆಯಿತು.ವರ್ಷಂಪ್ರತಿ ನಡೆದು ಬಂದಂತೆ ಈ ವರ್ಷವೂ ಕೂಡ ಗಣೇಶನ ವಿಗ್ರಹವನ್ನು ಆಲೂರು ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಿ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ
ಮೂರು ದಿನಗಳ ಕಾಲ ಪೂಜಿಸಿ ಗುರುವಾರದಂದು ಸೌಪರ್ಣಿಕಾ ನದಿಯಲ್ಲಿ ಗಣೇಶ ವಿಗ್ರಹವನ್ನು ಜಲಸ್ತಂಭನ ಮಾಡಲಾಯಿತು.ಉತ್ಸವದಂತೆ ಆಚರಣೆಗೊಳ್ಳುವ ಗಣೇಶೋತ್ಸವ ಕಾರ್ಯಕ್ರಮ ಆಲೂರು ಹರ್ಕೂರು ಗ್ರಾಮಸ್ಥರ ಒಗ್ಗೂಡುವಿಕೆಯಿಂದ ನಡೆಯುವುದು ವಿಶೇಷವಾಗಿದೆ.ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕ ಮಹಾ ಅನ್ನಸಂತರ್ಪಣೆ .ಶಾಲಾ ಮಕ್ಕಳು ಮತ್ತು ಸಾರ್ವಜನಿಕರಿಂದ ಸಾಂಸ್ಕೃತಿಕ ಕಾರ್ಯಕ್ರಮ,ಸಂಗೀತ ರಸಮಂಜರಿ ಕಾರ್ಯಕ್ರಮ, ಭಜನಾ ಕಾರ್ಯಕ್ರಮ, ಯಕ್ಷಗಾನ ಕಾರ್ಯಕ್ರಮ, ಧಾರ್ಮಿಕ ಸಭಾ ಕಾರ್ಯಕ್ರಮ,ಜರಗಿತು.ಊರ ಗ್ರಾಮಸ್ಥರು ಶ್ರೀ ಮಹಾಗಣಪತಿ ದೇವರ ಪ್ರಸಾದ ಸ್ವೀಕರಿಸಿದರು.ಅದ್ದೂರಿ ಮೆರವಣಿಗೆಯೊಂದಿಗೆ ಸೌಪರ್ಣಿಕಾ ನದಿಯಲ್ಲಿ ಗಣೇಶ ವಿಗ್ರಹವನ್ನು ವಿಸರ್ಜನೆ ಮಾಡಲಾಯಿತು.ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಾಜಿಮಕ್ಕಿ ನಿವಾಸಿಯಾಗಿರುವ ಹವ್ಯಾಸಿ ಯಕ್ಷಗಾನ ಕಲಾವಿದ ಯಕ್ಷ ಪೋಷಕ,ಖ್ಯಾತ ದಾರು ಶಿಲ್ಪಿ ರವೀಂದ್ರ…
ಕುಂದಾಪುರ:ದೇಶದ ಭದ್ರತೆ ಹಿತದೃಷ್ಠಿಯಿಂದ ನೌಕಪಡೆ,ಕಸ್ಟಮ್ಸ್ ಇಲಾಖೆ,ಕರಾವಳಿ ಕಾವಲು ಲೀಸ್ ಪಡೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಬುಧವಾರದಿಂದ 2 ದಿನಗಳ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ಎಲೆವೆಂಶಿಯಾ 2ಕೆ24 ಫೆಸ್ಟ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.ರೋಬೊಸಾಫ್ಟ್…
ಉಡುಪಿ:ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಕಬ್ವಿನಾಲೆ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ…
ಕುಂದಾಪುರ:ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ,ಕರ್ನಾಟಕ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ…
ಮುಳ್ಳಿಕಟ್ಟೆ:ಕುಂದಾಪುರ ದಿಂದ ಅರಾಟೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು…