ಗಂಗೊಳ್ಳಿ:ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ವತಿಯಿಂದ 13ನೇ ವರ್ಷದ ವಿದ್ಯಾಗಣಪತಿ ಉತ್ಸವ,ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮ ಶ್ರೀ ವೀರೇಶ ಮಾಂಗಲ್ಯ ಮಂದಿರ ಗಂಗೊಳ್ಳಿಯಲ್ಲಿ ಬುಧವಾರ ನಡೆಯಿತು.ಶ್ರೀ ವಿದ್ಯಾಗಣಪತಿ ದೇವರ ಭವ್ಯ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು.
ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಆನಂದ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,ಸಂಘಟಣೆಗಳನ್ನು ಹುಟ್ಟು ಹಾಕುವುದು ಸುಲಭ ಮುಂದುವರೆಸಿಕೊಂಡು ಹೋಗುವುದು ಕಷ್ಟ,ಸಂಘಗಳ ಬೆಳವಣಿಗೆಗೆ ಸಮಾಜ ಬಾಂಧವರು ಕೊಡುಗೆಗಳನ್ನು ನೀಡಿದಾಗ ಮಾತ್ರ ಸಂಘವು ಸದೃಢವಾಗಿ ಬೆಳೆಯಲು ಸಾಧ್ಯವಿದೆ.ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿದ್ಯಾರ್ಥಿವೇತನ ನಿಡುತ್ತಿರುವುದು ಶ್ಲಾಘನೀಯ ಕೆಲಸ ಎಂದು ಹೇಳಿದರು.
ಬಿಲ್ಲವ ಸಮಾಜ ಸೇವಾ ಸಂಘ ಗಂಗೊಳ್ಳಿ ಮಾಜಿ ಅಧ್ಯಕ್ಷ ಮುತ್ತ ಬಿಲ್ಲವ ಮಾತನಾಡಿ,ಸ್ವಜಾತಿ ಬಾಂಧವರ ಸಹಕಾರ ಮತ್ತು ಹಿರಿಯರ ಆರ್ಶೀವಾದದಿಂದ ವಿದ್ಯಾಗಣಪತಿ ಉತ್ಸವ ನಡೆಯುತ್ತಾ ಬಂದಿದೆ.ವಿದ್ಯಾರ್ಥಿ ವೇತನ ಮತ್ತು ಪುರಸ್ಕಾರವನ್ನು ಪಡೆದಂತಹ ವಿದ್ಯಾರ್ಥಿಗಳು ಸಮಾಜಕ್ಕೆ ತಮ್ಮ ಕೊಡುಗೆ ನೀಡುವಂತೆ ಆಗಬೇಕು ಎಂದರು.ವಿದ್ಯಾಗಣಪತಿ ಸ್ಥಾಪಕಾಧ್ಯಕ್ಷ ಗಣೇಶ ಪೂಜಾರಿ ಉದ್ಘಾಟಿಸಿ ಶುಭಹಾರೈಸಿದಿರು.ಮಹೇಶ ಬಿ ಪೂಜಾರಿ ಬಾವಿಹಿತ್ಲು ಗಂಗೊಳ್ಳಿ ವಿದ್ಯಾರ್ಥಿವೇತನ ವಿತರಣೆ ಮಾಡಿದರು.ಗುಜ್ಜಾಡಿ ಸಂಘದ ಕೋಶಾಧಿಕಾರಿ ಪ್ರದೀಪ್ ಪೂಜಾರಿ ಬಹುಮಾನ ವಿತರಿಸಿದರು.ಬಿಲ್ಲವ ಸಮಾಜ ಸೇವಾ ಸಂಘ ಗಂಗೊಳ್ಳಿ ಅಧ್ಯಕ್ಷ ಗೋಪಾಲ ಬಿಲ್ಲವ,ರಘುರಾಮ ಪೂಜಾರಿ,ಸುರೇಶ್ ಪೂಜಾರಿ ಕೋಟೆಬಾಗಿಲು ಉಪಸ್ಥಿತರಿದ್ದರು.ಸಮಾಜ ಬಂಟಗರಡಿ ಮತ್ತು ದೈವದ 11 ಪಾರ್ಥಿಗಳನ್ನು ಸನ್ಮಾನಿಸಲಾಯಿತು.ಎಸ್‍ಎಸ್‍ಎಲ್‍ಎಸಿ ಮತ್ತು ಪಿ.ಯು.ಸಿ ಅತಿ ಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ,ಕ್ರೀಡಾ ಸಾಧಕರನ್ನು ಸನ್ಮಾನಿಸಲಾಯಿತು.ಸಂಘಟನಾ ಕಾರ್ಯದರ್ಶಿ ಕೃಷ್ಣ ಪೂಜಾರಿ ಮತ್ತು ಉಪನ್ಯಾಸಕಿ ಸುಮತಿ ಬಿಲ್ಲವ ನಿರೂಪಿಸಿದರು.ಪ್ರೇಮಾ ಸಿ ಪೂಜಾರಿ ವಾಚಿಸಿದರು.ರಾಧ.ಬಿ ವಂದಿಸಿದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…