ಕುಂದಾಪುರ

ಗಂಗೊಳ್ಳಿ:ವಿದ್ಯಾಗಣಪತಿ ಉತ್ಸವ,ವಿದ್ಯಾರ್ಥಿ ವೇತನ ವಿತರಣೆ

Share

ಗಂಗೊಳ್ಳಿ:ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ವತಿಯಿಂದ 13ನೇ ವರ್ಷದ ವಿದ್ಯಾಗಣಪತಿ ಉತ್ಸವ,ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮ ಶ್ರೀ ವೀರೇಶ ಮಾಂಗಲ್ಯ ಮಂದಿರ ಗಂಗೊಳ್ಳಿಯಲ್ಲಿ ಬುಧವಾರ ನಡೆಯಿತು.ಶ್ರೀ ವಿದ್ಯಾಗಣಪತಿ ದೇವರ ಭವ್ಯ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು.
ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಆನಂದ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,ಸಂಘಟಣೆಗಳನ್ನು ಹುಟ್ಟು ಹಾಕುವುದು ಸುಲಭ ಮುಂದುವರೆಸಿಕೊಂಡು ಹೋಗುವುದು ಕಷ್ಟ,ಸಂಘಗಳ ಬೆಳವಣಿಗೆಗೆ ಸಮಾಜ ಬಾಂಧವರು ಕೊಡುಗೆಗಳನ್ನು ನೀಡಿದಾಗ ಮಾತ್ರ ಸಂಘವು ಸದೃಢವಾಗಿ ಬೆಳೆಯಲು ಸಾಧ್ಯವಿದೆ.ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿದ್ಯಾರ್ಥಿವೇತನ ನಿಡುತ್ತಿರುವುದು ಶ್ಲಾಘನೀಯ ಕೆಲಸ ಎಂದು ಹೇಳಿದರು.
ಬಿಲ್ಲವ ಸಮಾಜ ಸೇವಾ ಸಂಘ ಗಂಗೊಳ್ಳಿ ಮಾಜಿ ಅಧ್ಯಕ್ಷ ಮುತ್ತ ಬಿಲ್ಲವ ಮಾತನಾಡಿ,ಸ್ವಜಾತಿ ಬಾಂಧವರ ಸಹಕಾರ ಮತ್ತು ಹಿರಿಯರ ಆರ್ಶೀವಾದದಿಂದ ವಿದ್ಯಾಗಣಪತಿ ಉತ್ಸವ ನಡೆಯುತ್ತಾ ಬಂದಿದೆ.ವಿದ್ಯಾರ್ಥಿ ವೇತನ ಮತ್ತು ಪುರಸ್ಕಾರವನ್ನು ಪಡೆದಂತಹ ವಿದ್ಯಾರ್ಥಿಗಳು ಸಮಾಜಕ್ಕೆ ತಮ್ಮ ಕೊಡುಗೆ ನೀಡುವಂತೆ ಆಗಬೇಕು ಎಂದರು.ವಿದ್ಯಾಗಣಪತಿ ಸ್ಥಾಪಕಾಧ್ಯಕ್ಷ ಗಣೇಶ ಪೂಜಾರಿ ಉದ್ಘಾಟಿಸಿ ಶುಭಹಾರೈಸಿದಿರು.ಮಹೇಶ ಬಿ ಪೂಜಾರಿ ಬಾವಿಹಿತ್ಲು ಗಂಗೊಳ್ಳಿ ವಿದ್ಯಾರ್ಥಿವೇತನ ವಿತರಣೆ ಮಾಡಿದರು.ಗುಜ್ಜಾಡಿ ಸಂಘದ ಕೋಶಾಧಿಕಾರಿ ಪ್ರದೀಪ್ ಪೂಜಾರಿ ಬಹುಮಾನ ವಿತರಿಸಿದರು.ಬಿಲ್ಲವ ಸಮಾಜ ಸೇವಾ ಸಂಘ ಗಂಗೊಳ್ಳಿ ಅಧ್ಯಕ್ಷ ಗೋಪಾಲ ಬಿಲ್ಲವ,ರಘುರಾಮ ಪೂಜಾರಿ,ಸುರೇಶ್ ಪೂಜಾರಿ ಕೋಟೆಬಾಗಿಲು ಉಪಸ್ಥಿತರಿದ್ದರು.ಸಮಾಜ ಬಂಟಗರಡಿ ಮತ್ತು ದೈವದ 11 ಪಾರ್ಥಿಗಳನ್ನು ಸನ್ಮಾನಿಸಲಾಯಿತು.ಎಸ್‍ಎಸ್‍ಎಲ್‍ಎಸಿ ಮತ್ತು ಪಿ.ಯು.ಸಿ ಅತಿ ಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ,ಕ್ರೀಡಾ ಸಾಧಕರನ್ನು ಸನ್ಮಾನಿಸಲಾಯಿತು.ಸಂಘಟನಾ ಕಾರ್ಯದರ್ಶಿ ಕೃಷ್ಣ ಪೂಜಾರಿ ಮತ್ತು ಉಪನ್ಯಾಸಕಿ ಸುಮತಿ ಬಿಲ್ಲವ ನಿರೂಪಿಸಿದರು.ಪ್ರೇಮಾ ಸಿ ಪೂಜಾರಿ ವಾಚಿಸಿದರು.ರಾಧ.ಬಿ ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago