ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ನಾಟಾ(NATA) ತರಗತಿಯ ಉದ್ಘಾಟನೆ,ಮಾಹಿತಿ ಕಾರ್ಯಕ್ರಮ.
ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾಗಿರುವ ನಾಟಾ(NATA) ಪರೀಕ್ಷೆಯ ತರಬೇತಿಯ ಕುರಿತಾಗಿ ಮಾಹಿತಿ ಕಾರ್ಯಕ್ರಮ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯ ಅಗತ್ಯತೆಯ ಕುರಿತು ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬೆಂಗಳೂರಿನ ಚಂದ್ರಶೇಖರ್ ರವರು ನಾಟಾ(NATA) ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದರು.ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ,ಬೋಧಕ ಬೋಧಕೇತರ ವೃಂದದವರು,ವಿದ್ಯಾರ್ಥಿಗಳು,ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.
ಉಪನ್ಯಾಸಕ ಅಭಿಜಿತ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.



















































































































































































































































































































































































































































































































































































































































































































































































































































































































































































































































































































































































































































































































































































































































































