ಕುಂದಾಪುರ:ಉಡುಪಿ ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸ.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ ಆಶ್ರಯದಲ್ಲಿ ಗಂಗೊಳ್ಳಿ ಎಸ್.ವಿ. ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಮಾರೋಪ ಸಮಾರಂಭ ಗುರುವಾರ ನಡೆಯಿತು.
ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ನಾಗೇಂದ್ರ ಪೈ,ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಉಪಾಧ್ಯಕ್ಷ ಜಿ.ವಿಠಲ ಶೆಣೈ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.ಪಂಚಾಯತ್ ಸದಸ್ಯ ಬಿ.ರಾಘವೇಂದ್ರ ಪೈ,ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಮತ್ತು ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ನಾಗರಾಜ ಶೆಟ್ಟಿ,ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ್ ಮತ್ತು ಲಾವಣ್ಯ ಉಪಸ್ಥಿತರಿದ್ದರು.ಸಹಶಿಕ್ಷಕಿ ಸುಜಾತಾ ಸ್ವಾಗತಿಸಿ,ನಿರ್ವಹಿಸಿದರು.
ಫಲಿತಾಂಶ :-
17 ವರ್ಷದ ಒಳಗಿನ:ಬಾಲಕರ ವಿಭಾಗ:ಬ್ರಹ್ಮಾವರ ತಾಲೂಕು ಚೇತನಾ ಹೈಸ್ಕೂಲ್ (ಪ್ರಥಮ), ಕುಂದಾಪುರ ತಾಲೂಕು ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ (ದ್ವಿತೀಯ)
ಬಾಲಕಿಯರ ವಿಭಾಗ:ಕಾರ್ಕಳ ತಾಲೂಕು ಸರಕಾರಿ ಪ್ರೌಢಶಾಲೆ ಪೆರ್ವಾಜೆ (ಪ್ರಥಮ), ಬ್ರಹ್ಮಾವರ ತಾಲೂಕು ಎಸ್.ವಿ.ವಿ.ಎನ್. ಆಂಗ್ಲ ಮಾಧ್ಯಮ ಶಾಲೆ ಹೇರಾಡಿ (ದ್ವಿತೀಯ)
14 ವರ್ಷದ ಒಳಗಿನ:ಬಾಲಕರ ವಿಭಾಗ:ಬ್ರಹ್ಮಾವರ ತಾಲೂಕು ಎಸ್.ವಿ.ವಿ.ಎನ್. ಆಂಗ್ಲ ಮಾಧ್ಯಮ ಶಾಲೆ ಹೇರಾಡಿ (ಪ್ರಥಮ),ಕುಂದಾಪುರ ತಾಲೂಕು ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ (ದ್ವಿತೀಯ)
ಬಾಲಕಿಯರ ವಿಭಾಗ:ಬ್ರಹ್ಮಾವರ ತಾಲೂಕು ಎಸ್.ವಿ.ವಿ.ಎನ್. ಆಂಗ್ಲ ಮಾಧ್ಯಮ ಶಾಲೆ ಹೇರಾಡಿ (ಪ್ರಥಮ), ಕಾರ್ಕಳ ತಾಲೂಕು ಸರಕಾರಿ ಪ್ರೌಢಶಾಲೆ ಪೆರ್ವಾಜೆ (ದ್ವಿತೀಯ)
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…