ಸಾಧಕರ‌ ಜೀವನದ ಯಶೋಗಾಥೆ ಮಾರ್ಗದರ್ಶಿ ಆಗುತ್ತದೆ -ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Share

Advertisement
Advertisement
Advertisement

ಕುಂದಾಪುರ:ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ಅವರು ಈ ಹಂತಕ್ಕೆ ಬೆಳೆಯುವುದರ ಹಿಂದೆ ಸಾಕಷ್ಟು ಪರಿಶ್ರಮವಿದೆ.ಅವರ ಸಾಧನೆಯ ಹಾದಿಯನ್ನು ನಾವು ಮೆಲುಕು ಹಾಕಬೇಕು. ಮುನ್ನೆಡೆಗೆ ಇಂಥಹ ಸಾಧಕರ ಜೀವನದ ಯಶೋಗಾಥೆ ಮಾರ್ಗದರ್ಶಿ ಆಗುತ್ತದೆ ಎಂದು ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ಹುಟ್ಟೂರ ಸನ್ಮಾನ ಸಮಿತಿ ನೇತೃತ್ವದಲ್ಲಿ.ಹಾಲಾಡಿಯ ಶ್ರೀಮತಿ ಶಾಲಿನಿ ಜಿ.ಶಂಕರ್ ಕನ್ವೆಶನ್ ಸೆಂಟರ್‍ನಲ್ಲಿ ನಡೆದ ಗೌರವ ಡಾಕ್ಟರ್ ಆಫ್ ಸೈನ್ಸ್ ಪುರಸ್ಕೃತರಾದ ಮೈಸೂರು ಮರ್ಕಂಟೈಲ್ ಕಂಪನಿ ಅಧ್ಯಕ್ಷರು ಮತ್ತು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಬೆಂಗಳೂರು ಇದರ ಅಧ್ಯಕ್ಷರಾಗಿರುವ ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ಅವರ ಹುಟ್ಟೂರ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ಅವರು ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುತ್ತಿದ್ದಾರೆ.ಸಮಾಜಕ್ಕೆ ಸಹಾಯ ಹಸ್ತ ನೀಡುತ್ತಿದ್ದಾರೆ. ಕೆಲವೇ ಕೆಲವು ವ್ಯಕ್ತಿಗಳಲ್ಲಿ ಸಮಾಜಕ್ಕೆ ಸ್ಪಂದಿಸುವ ಹೃದಯ ಶ್ರೀಮಂತಿಕೆ ಇರುತ್ತದೆ.ದೇವರ ರೂಪದಲ್ಲಿ ಇಂಥಹ ವ್ಯಕ್ತಿಗಳು ಸಮಾಜಕ್ಕೆ ಸ್ಪಂದಿಸುತ್ತಾರೆ ಎಂದು ಅಭಿಪ್ರಾಯ ಪಟ್ಟರು.ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಕರ್ನಾಟಕ ವಿಧಾನಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪ್‍ಚಂದ್ರ ಶೆಟ್ಟಿ ಯವರು ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ದಂಪತಿಗಳನ್ನು ಸನ್ಮಾನಿಸಿದರು.

ಹುಟ್ಟೂರ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಶ್ರೀನಿವಾಸ ಶೆಟ್ಟಿ ಹಾಲಾಡಿ ಅವರು, ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಂಡು ರಾಜ್ಯದಲ್ಲಿ ಪ್ರಥಮ ಬಾರಿಗೆ ಖಾಸಗಿ ಹಾಗೂ ಸರ್ಕಾರ ಸಹಭಾಗಿತ್ವದಲ್ಲಿ ಪಬ್ಲಿಕ್ ಸ್ಕೂಲ್ ನಿರ್ಮಾಣವಾಗುತ್ತಿದೆ. ಡಿಸೆಂಬರನಲ್ಲಿ ಉದ್ಘಾಟನೆಯಾಗಲಿದೆ.
ಹಾಲಾಡಿ ನನ್ನ ಹುಟ್ಟೂರು. ಹಾಲಾಡಿಯಲ್ಲಿ 4-5 ಸರ್ಕಾರಿ ಶಾಲೆಗಳಿವೆ.ಅವುಗಳನ್ನೆಲ್ಲ ಒಟ್ಟುಗೂಡಿಸಿ ಪಬ್ಲಿಕ್ ಸ್ಕೂಲ್ ನಿರ್ಮಾಣ ಮಾಡುವುದಾಗಿ ತೀರ್ಮಾನಿಸಿದ್ದೇನೆ.ಈ ಸಂದರ್ಭದಲ್ಲಿ ಘೋಷಣೆ ಮಾಡುತ್ತೇನೆ ಎಂದು ಹೇಳಿದರು.ವೇ.ಮೂ.ತಟ್ಟುವಟ್ಟು ವಾಸುದೇವ ಜೋಯಿಸ ಹಾಲಾಡಿ ಆಶೀರ್ವಚನ ನೀಡಿದರು.ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರು, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಯವರು, ಉದ್ಯಮಿ ಎಂ ದಿನೇಶ್ ಹೆಗ್ಡೆ ಮೊಳಹಳ್ಳಿ ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ ಚೋರಾಡಿ, ಸನ್ಮಾನ ಸಮಿತಿ ಗೌರವಾಧ್ಯಕ್ಷ ಮಂಜುನಾಥ ಕಾಮತ್, ಗ್ರಾ.ಪಂ. ಮಾಜಿ ಅಧ್ಯಕ್ಷ ನಾಗರಾಜ ಗೋಳಿ, ನ್ಯಾಯವಾದಿ ರವಿರಾಜ ಶೆಟ್ಟಿ ಉಪಸ್ಥಿತರಿದ್ದರು.ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಪ್ರಾಸ್ತಾವಿಕ ಮಾತುಗಳನ್ನಾಡಿದರುಭಾಗವತ ರಾಘವೇಂದ್ರ ಮಯ್ಯ ಪ್ರಾರ್ಥನೆ ಮಾಡಿದರು. ಹುಟ್ಟೂರ ಸಮಿತಿ ಸರ್ವೋತ್ತ ಶೆಟ್ಟಿ ಸ್ವಾಗತಿಸಿದರು. ಆರ್.ಜೆ ನಯನ ಕಾರ್ಯಕ್ರಮ ನಿರ್ವಹಿಸಿದರು. ಮುಖ್ಯೋಪಾಧ್ಯಾಯಿನಿ ರೋಶನಿ ಬಿ ವಂದಿಸಿದರು.

Advertisement


Share

Leave a comment

Your email address will not be published. Required fields are marked *

You cannot copy content of this page