ಕುಂದಾಪುರ:ಸದಸ್ಯರ ಹೆಚ್ಚಿನ ಪ್ರೆÇೀತ್ಸಾಹದಿಂದ ಪ್ರತಿವರ್ಷ ಠೇವಣಿ ಸಂಗ್ರಹಣೆ ಮತ್ತು ಸಾಲ ವಸೂಲಾತಿಯಲ್ಲಿ ಗುರಿಯನ್ನು ಸಾಧಿಸಲಾಗುತ್ತಿದೆ.2022-23ನೇ ಸಾಲಿನಲ್ಲಿ 114 ಕೋಟಿ ರೂ.ಗೂ ಮಿಕ್ಕಿ ವ್ಯವಹಾರ ನಡೆಸಿದ್ದು, 40.99 ಲಕ್ಷ ರೂ. ನಿವ್ವಳ ಲಾಭ ಹೊಂದಿದೆ.ಲಾಭಾಂಶದಲ್ಲಿ ಸದಸ್ಯರಿಗೆ ಶೇ.10 ಪಾಲು ಮುನಾಫೆ ನೀಡಲು ನಿರ್ಧರಿಸಲಾಗಿದೆ ಎಂದು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷ ಆನಂದ ಬಿಲ್ಲವ ಹೇಳಿದರು.
ಗಂಗೊಳ್ಳಿ ಶ್ರೀರಾಮ ಮಂದಿರದಲ್ಲಿ ನಡೆದ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿರ್ದೇಶಕರಾದ ಕೆ.ಮಾಧವ ಖಾರ್ವಿ,ಹರೀಶ ಮೇಸ್ತ,ಗೋಪಾಲ ಜಿ.ನಾಯ್ಕ್,ಶ್ರೀನಿವಾಸ ಜತ್ತನ್, ಸುಭಾಶ್ಚಂದ್ರ ಪೂಜಾರಿ,ಚಂದ್ರಶೇಖರ ಪೂಜಾರಿ,ಚಂದ್ರಮತಿ ಹೆಗ್ಡೆ,ಪ್ರೇಮಾ ಸಿ.ಪೂಜಾರಿ,ಯಮುನಾ, ನಾಗರಾಜ ಎಂ. ಮತ್ತು ಲಕ್ಷ್ಮಣ ಉಪಸ್ಥಿತರಿದ್ದರು.ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ 26 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ದಯಾನಂದ ಗಾಣಿಗ ವರದಿ ವಾಚಿಸಿದರು.ಉಪಾಧ್ಯಕ್ಷ ವಾಸುದೇವ ಶೇರುಗಾರ್ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…