ಉಡುಪಿ

ಕುಂದಾಪುರ-ಬೈಂದೂರು ವಲಯ ಲಾರಿ ಟೆಂಪೋ ಮಾಲೀಕರು ಚಾಲಕರ ಸಂಘದ ತುರ್ತು ಸಭೆ

Share

ಉಡುಪಿ:ಕುಂದಾಪುರ ಮತ್ತು ಬೈಂದೂರು ವಲಯದ ಲಾರಿ ಮತ್ತು ಟೆಂಪೋ ಮಾಲಿಕರು ಹಾಗೂ ಚಾಲಕರ ಸಂಘದ ತುರ್ತು ಸಭೆ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ಬುಧವಾರ ನಡೆಯಿತು.
ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆಗೆ ಅವರಿಗೆ ಮನವಿಯನ್ನು ನೀಡಲಾಯಿತು.

ಕುಂದಾಪುರ ಮತ್ತು ಬೈಂದೂರು ವಲಯದ ಲಾರಿ ಮಾಲೀಕರು ಮತ್ತು ಚಾಲಕರ ಸಂಘದ ಜಂಟಿ ಅಧ್ಯಕ್ಷ ದಿವಾಕರ ಶೆಟ್ಟಿ ಮಾತನಾಡಿ,ಈ ಹಿಂದೆ ಕೆಂಪು ಕಲ್ಲು ಮತ್ತು ಮಣ್ಣು ಸಾಗಾಟ ಮಾಡಲು ಕೃಷಿ ಅಭಿವೃದ್ಧಿ ಉದ್ಧೇಶದಿಂದ 3ಎ ಅಡಿಯಲ್ಲಿ ಪರ್ಮಿಟ್ ನೀಡಿ ಕಳೆದ 5 ವರ್ಷದಿಂದ ಸರಕಾರ ಅನುಕೂಲ ಮಾಡಿಕೊಟ್ಟಿದೆ.ಪ್ರಸ್ತುತ 3ಎ ಲೈಸನ್ಸ್‍ನ್ನು ರದ್ದುಪಡಿಸಿದ್ದರಿಂದ ನಮಗೆ ಬಹಳಷ್ಟು ತೊಂದರೆ ಆಗಿದೆ.ಕಟ್ಟಡ ಸಾಮಾಗ್ರಿ ತುಂಬಿದ ಗಾಡಿಗಳನ್ನು ಹಿಡಿದು ನಮ್ಮ ಮೇಲೆ ಮತ್ತು ವಾಹನದ ಮೇಲೆ ಅನಗತ್ಯವಾಗಿ ಪ್ರಕರಣ ದಾಖಲಿಸಿ ಮಾನ ಮರ್ಯಾದೆ ಹರಾಜು ಹಾಕಲಾಗುತ್ತಿದೆ.ಸಂಕಷ್ಟದ ಪರಿಸ್ಥಿತಿಯಲ್ಲಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಳ್ಳಲಾಗಿದ್ದು.3ಎ ಅಡಿಯಲ್ಲಿ ಪರ್ಮಿಟ್ ನೀಡುವ ತನಕ ಮುಷ್ಕರವನ್ನು ಕೈಬಿಡುವ ಪ್ರಶ್ನೆಯೆ ಇಲ್ಲಾ ಎಂದು ಹೇಳಿದರು.
ಸೆ.29 ರಂದು ಶುಕ್ರವಾರ ಕುಂದಾಪುರ ಗಾಂಧಿ ಮೈದಾನದಲ್ಲಿ ಲಾರಿಗಳನ್ನು ನಿಲ್ಲಿಸಿ ಶಾಸ್ತ್ರಿ ಪಾರ್ಕ್ ನಿಂದ ತಾಲೂಕು ಕಛೇರಿ ತನಕ ಕಾಲ್ನಡಿಗೆಯಲ್ಲಿ ಸಾಗಿ ಎ.ಸಿ ಮತ್ತು ತಹಶೀಲ್ದಾರರಿಗೆ ಮನವಿಯನ್ನು ನೀಡಲಾಗುವುದು ಎಂದು ತಿಳಿಸಿದರು.

ಉಡುಪಿ ಜಿಲ್ಲಾ ರೈತ ಸಂಘದ ಪ್ರತಿನಿಧಿ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ಮಾತನಾಡಿ,ನಮ್ಮ ಜಿಲ್ಲೆಯಲ್ಲಿ ಅನಗತ್ಯವಾಗಿ ತುರ್ತು ಪರಿಸ್ಥಿತಿಯನ್ನು ಹೇರಲಾಗಿದೆ.ಕೆಂಪು ಕಲ್ಲು,ಮಣ್ಣು,ಮರಳು ಸಾಗಾಟ ಹಾಗೂ ಜೆಲ್ಲಿ ಕಲ್ಲುಗಳ ಸಾಗಾಟ ಮಾಡುವ ವಾಹನಗಳ ಮೇಲೆ ಜಿಲ್ಲಾಡಳಿತ ಅವೈಜ್ಞಾನಿಕ ರೀತಿಯಲ್ಲಿ ಕ್ರಮಗಳನ್ನು ಕೈಗೊಂಡಿದ್ದರಿಂದ ಕೂಲಿ ಕಾರ್ಮಿಕರಿಗೆ,ಗೂಡಂಗಡಿಗಳಿಗೆ,ಕಟ್ಟಡ ಕಾರ್ಮಿಕರ ಹೊಟ್ಟೆ ಮೇಲೆ ಬರೆ ಬಿದ್ದಿದೆ.ಬಿಗಿ ಕಾನೂನನ್ನು ಸಡಿಲಗೊಳಿಸಿ ಹಿಂದಿನಂತೆ ಸಾಂಪ್ರದಾಯಿಕ ಸಾಗಾಟಕ್ಕೆ ಅವಕಾಶ ಮಾಡಿಕೊಡ ಬೇಕು.ಕೆಂಪು ಮಣ್ಣು ಸಾಗಾಟಕ್ಕೂ ನಿರ್ಬಂಧ ಹೇರಿದ್ದರಿಂದ ತೋಟದ ಕೆಲಸಕ್ಕೆ ರೈತರಿಗೆ ತೊಂದರೆ ಆಗುತ್ತಿದೆ ಎಂದರು.
ಈ ಸಂದರ್ಭ ಕುಂದಾಪುರ ಮತ್ತು ಬೈಂದೂರು ಭಾಗದ ಲಾರಿ ಮಾಲೀಕರು ಮತ್ತು ಚಾಲಕರು ಸಂಘದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago