ಕುಂದಾಪುರ:ಗಂಗೊಳ್ಳಿ ಮಹಾಸತಿ ಪ್ರಾಥಮಿಕ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಗಂಗೊಳ್ಳಿ ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಮಹಾಸಭೆ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷೆ ನೀಲಾವತಿ ಎಸ್.ಖಾರ್ವಿ ಮಾತನಾಡಿ, ವರದಿ ವರ್ಷದಲ್ಲಿ ಸಂಘವು 20.54 ಲಕ್ಷ ರೂ. ಪಾಲು ಬಂಡವಾಳವನ್ನು ಹೊಂದಿದೆ.14.73 ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದ್ದು,7.48 ಕೋಟಿ ರೂ.ಗಳನ್ನು ಇತರ ಸಂಘ, ಬ್ಯಾಂಕುಗಳಲ್ಲಿ ಹೂಡಿಕೆ ಮಾಡಲಾಗಿದೆ.ವರದಿ ಸಾಲಿನಲ್ಲಿ ವರ್ಷಾಂತ್ಯಕ್ಕೆ ಹೊರಬಾಕಿ ಸಾಲ 9.08 ಕೋಟಿ.ರೂ ಇದ್ದು,ಸಂಘವು 17.40 ನಿವ್ವಳ ಲಾಭ ಗಳಿಸಿದೆ.ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ಗಣಪತಿ ಖಾರ್ವಿ 2023-2024ನೇ ಸಾಲಿನ ಆಯ-ವ್ಯಯ ಅಂದಾಜು ಬಜೆಟ್ ಹಾಗೂ 2022-23ನೇ ಸಾಲಿನ ಲಾಭಾಂಶ ವಿಂಗಡನೆಯನ್ನು ಮಂಡಿಸಿದರು.ಸಂಘದ ಉಪಾಧ್ಯಕ್ಷೆ ಶೈಲಾ ಎಂ. ಖಾರ್ವಿ,ನಿರ್ದೇಶಕರಾದ ಸುಶೀಲಾ ಎ.ಖಾರ್ವಿ,ಶಾರದಾ ಆರ್. ಹೆಗ್ಡೆ,ಅನಿತಾ ವಿ.ಖಾರ್ವಿ,ಜಯಂತಿ ಆರ್.ಪಠೇಲ್,ರೇಖಾ ಜಿ.ಖಾರ್ವಿ ಉಪಸ್ಥಿತರಿದ್ದರು.ಶಾರದಾ ಎಸ್. ಖಾರ್ವಿ ಸ್ವಾಗತಿಸಿದರು.ಸುನೀತಾ ಪ್ರಶಾಂತ ಖಾರ್ವಿ ಪ್ರಾರ್ಥಿಸಿದರು.ಸುರೇಖಾ ಎನ್ ಕಾನೋಜಿ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…