ಕುಂದಾಪುರ:ಉಡುಪಿ ಜಿಲ್ಲೆಯ ಬೈಂದೂರು ವೃತ್ತದ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸಾರ್ವಜನಿಕರಿಗೆ ಸ್ವಲ್ಪ ಮಟ್ಟಿನ ತೊಂದರೆಯನ್ನು ನೀಡುತ್ತಿದ್ದ ಮಾನಸಿಕ ಅಸ್ವಸ್ಥ,ಮೂಕ ಯುವಕನನ್ನು ಕೊಲ್ಲೂರು ಪೊಲೀಸರ ವಿನಂತಿ ಮೇರೆಗೆ ಗಂಗೊಳ್ಳಿಯ ಆಪತ್ಭಾಂದವ ಆಂಬ್ಯುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಅವರು ಕೊಲ್ಲೂರಿಗೆ ತೆರಳಿ ತನ್ನ ಆಂಬ್ಯುಲೆನ್ಸ್ ಮೂಲಕ ಯುವಕನನ್ನು ಕೇರಳ ರಾಜ್ಯದ ಸ್ನೇಹಾಲಯ ಆಶ್ರಮಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.ಸ್ನೇಹಾಲಯ ಮುಖ್ಯಸ್ಥರಾದ ಜೋಸೆಫ್ ಕ್ರಾಸ್ತಾ ಅವರು ವರು ಯುವಕನನ್ನು ಯಾವುದೇ ಫಲಾಪೇಕ್ಷೆ ಇಲ್ಲದೇ ಆತ್ಮೀಯವಾಗಿ ಬರಮಾಡಿಕೊಂಡು ಆಶ್ರಯ ನೀಡಿದರು.ಕೊಲ್ಲೂರು ಪೊಲೀಸ್ ಠಾಣಾಧಿಕಾರಿ ಜಯಶ್ರೀ ಹೊನ್ನೂರ ಹಾಗೂ ಸಿಬ್ಬಂದಿ ವರ್ಗ,ಆಂಬ್ಯುಲೆನ್ಸ್ ಚಾಲಕ ಅಬ್ರಾರ್,ಅಜಯ್ ಗೊಂಸಾಲ್ವಸ್ ತ್ರಾಸಿ, ಮಂಜುನಾಥ್ ಸಾಲಿಯಾನ್ ತ್ರಾಸಿ,ಲಿಪ್ಟನ್ ಒಲಿವೆರ ತ್ರಾಸಿ, ಹರೀಶ್ ಕೊಡಪಾಡಿ ಸಹಕಾರವನ್ನು ನೀಡಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…