ಕುಂದಾಪುರ:ಬೈಂದೂರು ಮತ್ತು ಕುಂದಾಪುರ ತಾಲೂಕು ಲಾರಿ ಮತ್ತು ಟೆಂಪೆÇ ಮಾಲೀಕರು ಹಾಗೂ ಚಾಲಕರ ಸಂಘದ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಕೈಗೊಂಡಿದ್ದ ಕಟ್ಟಡ ಸಾಮಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು ತಾಲೂಕಿನ ಭಾಗಗಳಲ್ಲಿ ಲಾರಿಗಳ ಓಡಾಟ ಸಂಪೂರ್ಣ ಸ್ತಬ್ಧಗೊಂಡಿದೆ.
ಅನಿರ್ದಿಷ್ಟಾವಧಿಗಳ ವರೆಗೆ ಕೈಗೊಂಡಿದ್ದ ಮುಷ್ಕರದ ಅಂಗವಾಗಿ ಲಾರಿ ಮಾಲೀಕರು ಮತ್ತು ಚಾಲಕರು ತಮ್ಮ ವಾಹನಗಳನ್ನು ಹೆಮ್ಮಾಡಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಗುರುವಾರವೂ ನೂರಾರು ಲಾರಿಗಳು ಹೆಮ್ಮಾಡಿ ಹೆದ್ದಾರಿ ರಸ್ತೆ ಬದಿಯಲ್ಲಿ ಠಿಕಾಣಿ ಹೂಡಿವೆ.ಸೆ.29 ರಂದು ಶುಕ್ರವಾರ ಕುಂದಾಪುರ ಗಾಂಧಿ ಮೈದಾನದಲ್ಲಿ ಲಾರಿಗಳನ್ನು ನಿಲ್ಲಿಸಿ ಶಾಸ್ತ್ರಿ ಪಾರ್ಕ್ ನಿಂದ ತಾಲೂಕು ಕಚೇರಿ ತನಕ ಕೈಗೊಂಡಿದ್ದ ಕಾಲ್ನಡಿಗೆ ಜಾಥಾ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರದ್ದಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…