ಕುಂದಾಪುರ:ತುಂಡಾಗಿ ನೆಲಕ್ಕೆ ಬಿದ್ದ ವಿದ್ಯುತ್ ತಂತಿಯಿಂದ ಶಾಕ್ ತಗುಲಿ ದಂಪತಿಗಳಿಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಕಟ್‍ಬೇಲ್ತೂರು ಗ್ರಾಮದ ಸುಳ್ಸೆ ಎಂಬಲ್ಲಿ ಶುಕ್ರವಾರ ನಡೆದಿದೆ.ಮಹಾಬಲ ದೇವಾಡಿಗ (55) ಅವರ ಪತ್ನಿ ಲಕ್ಷ್ಮೀ ದೇವಾಡಿಗ (47) ಸಾವನ್ನಪ್ಪಿದ ದುರ್ದೈವಿಗಳು.
ಶುಕ್ರವಾರ ಮಧ್ಯಾಹ್ನ 3.30 ರ ಸುಮಾರಿಗೆ ಮಹಾಬಲ ದೇವಾಡಿಗ ಮತ್ತು ಅವರ ಪತ್ನಿ ಲಕ್ಷ್ಮೀ ದೇವಾಡಿಗ ಎನ್ನುವವರು ಕೆಲಸವನ್ನು ಮುಗಿಸಿಕೊಂಡು ತೆರಳುತ್ತಿರುವ ಸಂದರ್ಭ ಸುಳ್ಸೆ ಕರ್ಣಿಕರ ಮನೆ ಸಮೀಪ ಕಾಲು ದಾರಿಯಲ್ಲಿ ವಿದ್ಯುತ್ ಕಂಬದಿಂದ ಲೈನ್ ತುಂಡಾಗಿ ಕೇಳಕ್ಕೆ ಬಿದ್ದಿದೆ.ಕಾಲು ದಾರಿಯಲ್ಲಿ ಸಾಗುತ್ತಿದ್ದ ಸಮಯದಲ್ಲಿ ನೆಲಕ್ಕೆ ಬಿದ್ದ ವಿದ್ಯುತ್ ತಂತಿಯಿಂದ ಕರೆಂಟ್ ಶಾಕ್ ದಂಪತಿಗಳಿಬ್ಬರಿಗೆ ತಗುಲಿದ ಪರಿಣಾಮ ಸ್ಥಳದಲ್ಲೆ ಮೃತಪಟ್ಟಿದ್ದಾರೆ.ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮತ್ತು ಕಾಂಗ್ರೆಸ್ ಮುಖಂಡ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ,ಕುಂದಾಪುರ ಡಿ.ವೈ.ಎಸ್ಪಿ ಬೆಳಿಯಪ್ಪ,ಆರ್.ಐ ರಾಘವೇಂದ್ರ ದೇವಾಡಿಗ ಘಟನೆ ಸ್ಥಳ್ಕಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…