ಕುಂದಾಪುರ:ಪ್ರಧಾನ ಮಂತ್ರಿಗಳ ಮಹಾತ್ವಾಕಾಂಕ್ಷಿ ಯೋಜನೆ ಸ್ಚಚ್ಛಾ ಭಾರತ ಅಭಿಯಾನ ಇಂದು ವಿಶ್ವವ್ಯಾಪಿಯಾಗಿ ಪಸರಿಸಿದೆ ಸ್ವಚ್ಛತೆ ಎನ್ನುವುದು ಕಾನೂನಿ ನಿಂದ ಬರುವಂತಹದ್ದು ಅಲ್ಲಾ ಅರಿವು ನಿಂದ ಆಗುವಂತದ್ದು ತ್ಯಾಜ್ಯ ಮುಕ್ತ ಪರಿಸರವನ್ನು ನಿರ್ಮಾಣ ಮಾಡಲು ಎಲ್ಲರೂ ಪಣ ತೊಡಬೇಕು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಉಡುಪಿ ಜಿಲ್ಲಾ ಪಂಚಾಯತ್,ಕುಂದಾಪುರ ಮತ್ತು ಬೈಂದೂರು ತಾಲೂಕು ಪಂಚಾಯತ್ ಹಾಗೂ ಹೊಸಾಡು,ತ್ರಾಸಿ,ಗುಜ್ಜಾಡಿ,ಮರವಂತೆ ಪಂಚಾಯತ್ ಸಹಭಾಗಿತ್ವದಲ್ಲಿ ಭಾನುವಾರ ತ್ರಾಸಿ-ಮರವಂತೆ ಬೀಚ್‍ನಲ್ಲಿ ನಡೆದ ಸ್ವಚ್ಛತಾ ಹೀ ಸೇವಾ,ಸ್ವಚ್ಛತೇಯೆ ಸೇವೆ ಎಂಬ ವಿಶೇಷ ಆಂದೋಲನದ ಪ್ರಯುಕ್ತ ಆಯೋಜಿಸಿದ ಸ್ವಚ್ಛತಾ ಅಭಿಯಾನ ಮತ್ತು ಮಾನವ ಸರಪಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತ್ರಾಸಿ ಪಂಚಾಯತ್ ಅದ್ಯಕ್ಷ ಮಿಥುನ್ ದೇವಾಡಿಗ,ಮರವಂತೆ ಪಂಚಾಯಿತಿ ಅಧ್ಯಕ್ಷ ಲೋಕೇಶ್ ಖಾರ್ವಿ,ಗುಜ್ಜಾಡಿ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ,ಹೊಸಾಡು ಪಂಚಾಯಿತಿ ಆಡಳಿತಾಧಿಕಾರಿ ರಘುರಾಮ ಶೆಟ್ಟಿ,ಕುಂದಾಪುರ ಇಒ ಶಶಿಧರ ಕೆ.ಜಿ,ಬೈಂದೂರು ಇಒ ಭಾರತಿ,ಸುಮುಖ ಸುರೇಶ ಶೆಟ್ಟಿ ಉಪ್ಪುಂದ,ಪಂಚಾಯತ್ ಸದಸ್ಯರು,ಬಿ.ಬಿ.ಹೆಗ್ಡೆ ಕಾಲೇಜಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳು,ಎಸ್‍ಎಲ್‍ಆರ್‍ಎಂ ಘಟಕ,ಎಂಆರ್‍ಎಫ್ ಘಟಕದ ಸಿಬ್ಬಂದಿಗಳು,ಆಶಾ ಮತ್ತು ಅಂಗನವಾಡಿ,ಆರೋಗ್ಯ ಕಾರ್ಯಕರ್ತೆಯರು,ಸಂಜೀವಿನಿ ಸಂಘದ ಸದಸ್ಯರು,ತ್ರಾಸಿ ಮರವಂತೆ ಕ್ಲಿನ್ ಪ್ರಾಜೆಕ್ಟ್ ಸದಸ್ಯರು,ಸ್ಥಳೀಯರು,ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು.ತ್ರಾಸಿ ಪಂಚಾಯ್ ಪಿಡಿಒ ಶೋಭಾ ವಂದಿಸಿದರು.
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…