ಕುಂದಾಪುರ:ಗಂಗೊಳ್ಳಿ-ಕುಂದಾಪುರ ನಡುವೆ ಸಂಪರ್ಕ ಸೇತುವೆ ನಿರ್ಮಾಣ ಶೀಘೃ ಆಗಬೇಕೆಂದು ಸೇತುವೆ ಹೋರಾಟ ಸಮಿತಿ ವತಿಯಿಂದ ಗಂಗೊಳ್ಳಿ ಶ್ರೀವೀರೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಸೇತುವೆ ಹೋರಾಟ ಸಮಿತಿ ಅಧ್ಯಕ್ಷ ಉಮಾನಾಥ ದೇವಾಡಿಗ ಮಾತನಾಡಿ,ಗಂಗೊಳ್ಳಿ ಜನತೆಯ ಬಹು ಕಾಲದ ಬೇಡಿಕೆ ಇನ್ನೂ ಕೂಡ ಕನಸಾಗಿಯೇ ಉಳಿದಿದೆ.ಗಂಗೊಳ್ಳಿ-ಕುಂದಾಪುರ ನಡುವೆ ಪಂಚಗಂಗಾವಳಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿದರೆ ವ್ಯಾಪಾರ ವಹಿವಾಟುಗಳು ವೃದ್ಧಿ ಆಗುವುದ ಜತೆಗೆ ಗ್ರಾಮದ ಜನರಿಗೆ ಬಹಳಷ್ಟು ಅನುಕೂಲ ವಾಗಲಿದೆ ಎಂದರು.ಸೇತುವೆ ನಿರ್ಮಾಣ ಕಾರ್ಯದ ಬಗ್ಗೆ ಜನಪ್ರತಿನಿಧಿಗಳು ಆದಷ್ಟು ಬೇಗನೆ ಸ್ಪಂದನೆ ಮಾಡಬೇಕು.ಸಕಾರಾತ್ಮಕವಾದ ರೀತಿಯಲ್ಲಿ ಸ್ಪಂದಿಸದೆ ಇದ್ದಲ್ಲಿ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದರು.
ಸಮಿತಿ ಉಪಾಧ್ಯಕ್ಷರಾದ ಬಿ.ಗಣೇಶ ಶೆಣೈ,ಪಂಚಾಯಿತಿ ಉಪಾಧ್ಯಕಷೆ ಪ್ರೇಮಾ ಸಿ ಪೂಜಾರಿ, ಕಾರ್ಯದರ್ಶಿ ನವೀನ್ ಗಂಗೊಳ್ಳಿ,ಜತೆ ಕಾರ್ಯದರ್ಶಿ ಗಣೇಶ ಪಿ,ಖಜಾಂಚಿ ಸದಾಶಿವ ಖಾರ್ವಿ ಕಂಚುಗೋಡು,ಗ್ರಾ.ಪಂ ಸದಸ್ಯರಾದ ನಾಗರಾಜ ಖಾರ್ವಿ,ನಿರ್ಮಲಾ ಪೂಜಾರಿ,ಸಮಿತಿ ಪದಾಧಿಕಾರಿಗಳು,ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…