ಹೆಮ್ಮಾಡಿ ಜನತಾ ಕಾಲೇಜಿನಲ್ಲಿ:ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ಜಯಂತಿ ಆಚರಣೆ
ಕುಂದಾಪುರ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ಪ್ರೌಢ ಶಾಲೆ ಅವರ ಜಂಟಿ ಆಶ್ರಯದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ಜಯಂತಿಯನ್ನು ಆಚರಿಸಲಾಯಿತು.
ಕಾಲೇಜು ಹಾಗೂ ಪ್ರೌಢಶಾಲೆಯ ಸಿಬ್ಬಂದಿಗಳು ಗಾಂಧೀಜಿ ಹಾಗೂ ಶಾಸ್ತ್ರೀಯವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕಾಲೇಜಿನ ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರು ಗಾಂಧೀಜಿ ಹಾಗೂ ಶಾಸ್ತ್ರೀಯವರ ಜೀವನ ಹಾಗೂ ತತ್ವಾದರ್ಶಗಳ ಕುರಿತು ಮಾತನಾಡಿದರು.ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳವರ ಅವರು ಸ್ವಾಗತಿಸಿ ವಂದಿಸಿದರು.ಕಾಲೇಜಿನ ಬೋಧಕ,ಬೋಧಕೇತರ ವೃಂದದವರು,ಪ್ರೌಢಶಾಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಹಾಗೂ ಉಭಯ ಸಂಸ್ಥೆಗಳ ವಿದ್ಯಾರ್ಥಿಗಳು ಜನತಾ ಕ್ರೀಡಾಂಗಣವನ್ನು ಸ್ವಚ್ಚಗೊಳಿಸಿದರು.























































































































































































































































































































































































































































































































































































































































































































































































































































































































































































































































































































































































































































































































































































































































































