ಕುಂದಾಪುರ:ತಾಲೂಕಿನ ಸೇನಾಪುರ ರೈಲ್ವೆ ನಿಲ್ದಾಣದಲ್ಲಿ ಎಲ್ಲಾ ವರ್ಗದ ಪ್ರಮುಖ ಎಕ್ಸ್‍ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ವತಿಯಿಂದ ಅ.10 ಮಂಗಳವಾರ ದಂದು ಬೆಳಿಗ್ಗೆ 10 ಗಂಟೆ ಯಿಂದ ನಾಡ ಗ್ರಾಮ ಪಂಚಾಯತ್ ಬಳಿಯಿಂದ ಸೇನಾಪುರ ರೈಲು ನಿಲ್ದಾಣದ ವರೆಗೆ ಚಲೋ ಸೇನಾಪುರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
ಕುಂದಾಪುರ ತಾಲೂಕಿನ ಸೇನಾಪುರ ರೈಲು ನಿಲ್ದಾಣದಲ್ಲಿ ಮೂರು ರೈಲ್ವೆ ಟ್ರ್ಯಾಕ್‍ಗಳಿದ್ದು,ಎಲ್ಲಾ ರೀತಿಯ ಎಕ್ಸ್‍ಪ್ರೆಸ್ ರೈಲು ನಿಲುಗಡೆಗೆ ಎಲ್ಲಾ ರೀತಿಯ ವ್ಯವಸ್ಥೆಗಳಿವೆ.ಆದರೆ ಲೋಕಲ್ ರೈಲುಗಳು ಮಾತ್ರ ನಿಲುಗಡೆಯಾಗುತ್ತಿದೆ.ಸೇನಾಪುರ ರೈಲು ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆಯಾದರೆ ಸುಮಾರು 24 ಗ್ರಾಮಗಳ ಜನರಿಗೆ ಅನುಕೂಲವಾಗಲಿದ್ದು,ವ್ಯಾಪಾರ ವಹಿವಾಟು ವೃದ್ಧಿಯಾಗಲಿದೆ.ಎಕ್ಸ್‍ಪ್ರೆಸ್ ರೈಲು ನಿಲುಗಡೆ ಆಗಬೇಕ್ಕೆನ್ನುವ ಬಹು ಕಾಲದ ಬೇಡಿಕೆಗೆ ಸರಕಾರ ಸ್ಪಂದನೆ ಮಾಡದೆ ಇದ್ದಿದ್ದರಿಂದ ಎಕ್ಸ್‍ಪ್ರೆಸ್ ರೈಲು ಹೋರಾಟ ಸಮಿತಿ ವತಿಯಿಂದ ಅ.10 ರಂದು ಸೇನಾಪುರ ಚಲೋ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದ್ದು ಎಕ್ಸ್‍ಪ್ರೆಸ್ ರೈಲು ನಿಲುಗಡೆ ಮಾಡುವಂತೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿಯನ್ನು ನೀಡಲಾಗುದೆಂದು ಸಮಿತಿ ತಿಳಿಸಿದೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…