ರಾಜ್ಯ

ಸಿಎಂ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ:ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

Share

ಬೆಂಗಳೂರು:ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ,ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.ಉಡುಪಿ ಜಿಲ್ಲೆ ವ್ಯಾಪ್ತಿಯಲ್ಲಿನ ಮರಳು,ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.ರಾಜ್ಯ ಪರಿಸರ ಪ್ರಭಾವ ಮೌಲ್ಯ ಮಾಪನ ಪ್ರಾಧಿಕಾರ ಅನುಮತಿ ನೀಡಿದ ಬಳಿಕವೇ ಮರಳು ಬ್ಲಾಕ್ ಗಳಿಗೆ ಅನುಮತಿ ಪತ್ರ ದೊರೆಯುತ್ತದೆ. ಪ್ರಾಧಿಕಾರದ ಸಭೆ ತಿಂಗಳಿಗೊಮ್ಮೆ ನಡೆಯುವುದರಿಂದ ವಿಳಂಬವಾಗುತ್ತಿದೆ.ಈ ಪ್ರಕ್ರಿಯೆಗೆ ವೇಗ ನೀಡಬೇಕೆಂದು ಮುಖ್ಯ ಮಂತ್ರಿಗಳು ಪ್ರಾಧಿಕಾರದ ಆಯುಕ್ತರಿಗೆ ಸೂಚಿಸಿದರು.

ಹೊಸ ಮರಳು ನೀತಿ 2020 ನ್ನು 1.12.2021 ರಂದು ಜಾರಿಗೆ ತಂದಿದ್ದು,ಕಟ್ಟಡ ನಿರ್ಮಾಣ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ಸಾಂಪ್ರದಾಯಿಕವಾಗಿ ಮರಳು ತೆಗೆಯುವವರ ಹಿತಾಸಕ್ತಿ ಯನ್ನೂ ಕಾಪಾಡಬೇಕಿದೆ . ಕಾರ್ಮಿಕರಿಗೆ ಸಮಸ್ಯೆಯಾಗದಂತೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ವಿನಂತಿಸಿದರು.

Non CRZ ಪ್ರದೇಶದಲ್ಲಿ ಟೆಂಡರ್ ಕಂ ಹರಾಜು ಮೂಲಕ ಗುತ್ತಿಗೆ ಮಂಜೂರು ಮಾಡಲು 39 ಮರಳು ಬ್ಲಾಕ್ ಗಳನ್ನು ಗುರುತಿಸಲಾಗಿದೆ.ಈ ಪೈಕಿ 9 ಬ್ಲಾಕ್ ಗಳ ಟೆಂಡರ್ ಪ್ರಕ್ರಿಯೆ ಯಶಸ್ವಿಯಾಗಿದ್ದು,30 ಮರಳು ಬ್ಲಾಕ್ ಗಳಿಗೆ ಮರುಹಾರಾಜು ಪ್ರಕ್ರಿಯೆ ಶೀಘ್ರ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸಭೆಗೆ ಮಾಹಿತಿ ಒದಗಿಸಿದರು.

ಮರಳು ಗಣಿಗಾರಿಕೆಗೆ ಪರವಾನಗಿಯನ್ನು ಜಿಲ್ಲಾಧಿಕಾರಿಗಳ ಮುಖಾಂತರ ನೀಡಲು.ಮನೆ ಕಟ್ಟಲು ಅಗತ್ಯವಿರುವ ಸೈಜುಗಲ್ಲುಗಳಿಗೆ ಗಣಿಗಾರಿಕೆ ಮಾಡಲು ಕಾಯ್ದೆಯ ಸರಳೀಕರಣ ಮಾಡಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಬೇಕು ಎಂದು ಸಭೆಯಲ್ಲಿ ಮನವಿಯನ್ನು ಮಾಡಲಾಯಿತು.

ಕೆಂಪುಕಲ್ಲಿನ( Laterite) ಗಣಿಗಾರಿಕೆ ಗೆ 71 ಕಾರ್ಯಾದೇಶಗಳನ್ನು ಒಂದು ವರ್ಷದ ಅವಧಿಗೆ ನೀಡಲಾಗಿದೆ.ಖನಿಜವನ್ನು ಬಾಕ್ಸೈಟ್ ಆಗಿ ವಿಂಗಡಿಸಿರುವುದರಿಂದ 17.03.2023 ರಂದು ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು 1994 ಗೆ ತಿದ್ದುಪಡಿ ತಂದು ತಿದ್ದುಪಡಿ ನಿಯಮ 2023 ಜಾರಿಗೊಳಿಸಲಾಗಿದೆ.ಹೀಗಾಗಿ ಲ್ಯಾಟರೈಟ್ ಖನಿಜಕ್ಕೆ ಕಾರ್ಯಾದೇಶ ನೀಡುವುದನ್ನು ಕೈಬಿಡಲಾಗಿದೆ ಎಂದು ಸಭೆಯ ಗಮನಕ್ಕೆ ತರಲಾಯಿತು.

ಸ್ಥಳೀಯ ಜಿಲ್ಲೆಗೆ ಅಗತ್ಯವಿರುವಂತೆ ಕಾಯ್ದೆಗೆ ತಿದ್ದುಪಡಿ ಮಾಡಬಹುದು. Laterite ಸಂಬಂಧಿಸಿದಂತೆ ಹಿಂದಿನ ಸರ್ಕಾರ ಮಾಡಲಾಗಿರುವ ತಿದ್ದುಪಡಿಯನ್ನು ಪುನಃ ತಿದ್ದುಪಡಿ ಮಾಡಿ ವಾಹನಗಳಿಗೆ ಅನುಮತಿ ನೀಡಬಹುದು. ಕ್ರಶಿಂಗ್ ಮಾಡಲಾದ ಮಣ್ಣನ್ನು ಜಿಲ್ಲೆಯೊಳಗಿನ ಬಳಕೆಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.

ಜಿಲ್ಲಾ ಆಸ್ಪತ್ರೆಯಲ್ಲಿ 9 ಡಯಾಲಿಸಿಸ್ ಯಂತ್ರಗಳು ಕೆಟ್ಟಿದೆ.ಒಂದೇ ಯಂತ್ರ ಕಾರ್ಯನಿರ್ವಹಿಸುತ್ತಿದೆ.ಅಲ್ಲಿನ ಸಿಬ್ಬಂದಿಗೆ 6 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಕೂಡಲೇ ವೇತನ ನೀಡುವಂತೆ ಸಿಎಂ ಸೂಚಿಸಿದರು.

ಸಭೆಯಲ್ಲಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್, ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಸಚಿವರಾದ ಎಚ್.ಸಿ. ಮಹದೇವಪ್ಪ, ಚಲುವರಾಯಸ್ವಾಮಿ, ಬಿ.ನಾಗೇಂದ್ರ, ಹಿಂದುಳಿದ ವರ್ಗಗಳ ಆಯೋಗದ ಜಯಪ್ರಕಾಶ್ ಹೆಗ್ಡೆ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ಮಂಜುನಾಥ್ ಭಂಡಾರಿ, ಮಾಜಿ‌ ಸಚಿವ ವಿನಯ್ ಕುಮಾರ್ ಸೊರಕೆ, ಮುಖಂಡರಾದ ಗೋಪಲ್ ಪೂಜಾರಿ, ಪ್ರಸಾದ್ ಕಾಂಚನ್, ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಲಿ, ಎಂ.ಎ.ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾದ ಗಿರೀಶ್, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಹಾಜರಿದ್ದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago