ಕುಂದಾಪುರ:ಸಾವಿರಾರು ವರ್ಷಗಳ ಕಾಲ ಇತಿಹಾಸವನ್ನು ಹೊಂದಿರುವ ಕುಂದಾಪುರ ತಾಲೂಕಿನ ಪ್ರಸಿದ್ಧ ಗುಜ್ಜಾಡಿ ಗ್ರಾಮದ ಕೊಡಪಾಡಿ ಶ್ರೀ ಗುಹೇಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದ ಪ್ರಯುಕ್ತ ಅಷ್ಟಮಂಗಳ ಪ್ರಶ್ನೆ ಚಿಂತನಾ ಕಾರ್ಯಕ್ರಮ ಕೇರಳದ ಪ್ರಸಿದ್ಧ ದೈವಜ್ಞರಾದ ಶ್ರೀ ನಾರಾಯಣ ನಂಬೂದಿರಿ ಕೈಮುಕ್ಕು ಅವರ ಮಾರ್ಗದರ್ಶನದಲ್ಲಿ ದೇವರ ಸನ್ನಿಧಾನದಲ್ಲಿ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ನಡೆಯಿತು.
ತಂತ್ರಿಗಳಾದ ಕುಮಾರು ಗುರು ಕೊರಂಗ್ರಪಾಡಿ,ಶ್ರೀಶ ಭಟ್ ಹೊಸಾಡು ಮತ್ತು ಇತರ ದೈವಜ್ಞರು ಸಹಕರಿಸಿದರು,ದೇವಳದ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.ಭಾನುವಾರ ಆರಂಭಗೊಂಡ ಅಷ್ಟಮಂಗಳ ಪ್ರಶ್ನೆ ಮಂಗಳವಾರ ಸಮಾಪ್ತಿಗೊಳ್ಳಲಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…