ಕೊಲ್ಲೂರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ಕುಂದಾಪುರ:ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಭೇಟಿ ದರ್ಶನ ಪಡೆದರು.
ದೇವಳದ ವ್ಯವಸ್ಥಾಪನಾ ಸಮಿತಿ ವತಿಯಿಂದ ರಾಜ್ಯಪಾಲರನ್ನು ಗೌರವಿಸಲಾಯಿತು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು,ಸದಸ್ಯರು, ಅರ್ಚಕರು ಉಪಸ್ಥಿತರಿದ್ದರು.