ಕುಂದಾಪುರ:ತಿಂಡಿ ತಿನಿಸುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ರೈಲಿಗೆ ಬೆಂಕಿ ತಗುಲಿದ ಪರಿಣಾಮ ವಸ್ತುಗಳು ಸುಟ್ಟು ಹೋದ ಘಟನೆ ಬಿಜೂರು ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.ಅ.9 ರಂದು ಮುಂಬೈ ಕೋಲಾಡ್ ನಿಂದ ಮಂಗಳೂರು ಸುರತ್ಕಲ್ ಕಡೆಗೆ ಲಾರಿಗಳನ್ನು ಹೊತ್ತು ಸಾಗುತ್ತಿದ್ದ ಗೂಡ್ಸ್ ರೈಲಿನಲ್ಲಿ,ಬೈಂದೂರು ತಾಲೂಕಿನ ಬಿಜೂರು ರೈಲ್ವೆ ನಿಲ್ದಾಣದ ಸಮೀಪ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ ಲಾರಿಯೊಂದರಲ್ಲಿ ಬೆಂಕಿ ಹೊತ್ತಿಕೊಂಡು ಇರುವುದನ್ನು ನೋಡಿದ ಸಿಬಂದಿ ತಕ್ಷಣ ಗೂಡ್ಸ್ ರೈಲು ನಿಲ್ಲಿಸಿ ಬೆಂಕಿ ಆರಿಸಲು ಪ್ರಯತ್ನಿಸಿದ್ದರು.ಬೈಂದೂರು ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸಿದರು. ಲಾರಿಯೊಳಗಿದ್ದ ತಿಂಡಿ ತಿನಿಸುಗಳು ಭಾಗಶಃ ಸುಟ್ಟು ಹೋಗಿದೆ.ಸೂಕ್ತ ಸಮಯದಲ್ಲಿ ಕ್ರಮ ಕೈಗೊಂಡಿದ್ದರಿಂದ ಬಾರಿ ದೊಡ್ಡ ಅನಾಹುತ ತಪ್ಪಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…