ಕುಂದಾಪುರ

ಕಂಪ್ಯೂಟರ್ ತರಬೇತಿ ಕೇಂದ್ರ:ಲೈಬ್ರರಿ,ಪೀಠೋಪಕರಣ ಹಸ್ತಾಂತರ

Share

ಬೈಂದೂರು:ಸಮೃದ್ಧ ಬೈಂದೂರು ಯೋಜನೆಯ ಭಾಗವಾಗಿ ಸ್ವಯಂ ಸ್ಪೂರ್ತಿ ಫೌಂಡೇಶನ್ ಬೆಂಗಳೂರು ವತಿಯಿಂದ ಸ.ಹಿ.ಪ್ರಾ ಶಾಲೆ ಬಿಜೂರು,ಸ.ಹಿ.ಪ್ರಾ ಶಾಲೆ ಕಾಲ್ತೋಡು ಹಾಗೂ ಸ.ಹಿ.ಪ್ರಾ ಶಾಲೆ ಜಡ್ಕಲ್ ನಲ್ಲಿ ನಿರ್ಮಿಸಿದ
ಕಂಪ್ಯೂಟರ್ ಲ್ಯಾಬ್ ಮತ್ತು ಗ್ರಂಥಾಲಯಗಳನ್ನು ಒಳಗೊಂಡ ಸ್ವಯಂ ಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ‌ ಅವರು ಉದ್ಘಾಟಿಸಿ,ಪುಸ್ತಕ ಕ್ರೀಡಾ ಸಾಮಾಗ್ರಿಗಳನ್ನು ಹಸ್ತಾಂತರ ಮಾಡಿದರು.ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು ಸಮೃದ್ಧ ಬೈಂದೂರು ಪರಿಕಲ್ಪನೆ ಯೋಜನೆಯ ಬಗ್ಗೆ ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 300 ಟ್ರೀಸ್ ಕಾರ್ಯಕ್ರಮದ ಕುರಿತು ವಿವರಿಸಿದರು.ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳು,ಊರವರು ಎಸ್.ಡಿ.ಎಂ.ಸಿ ಮತ್ತು ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು ಎಂದರು.
ಸ್ವಯಂಸ್ಪೂರ್ತಿ ಫೌಂಡೇಶನ್ ಅಧ್ಯಕ್ಷ ನಾಗರಾಜ ಶೆಟ್ಟಿ ಜಡ್ಕಲ್ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಕಲಿಕಾ ಸ್ನೇಹಿ ವಾತಾವರಣ ನಿರ್ಮಿಸುವ ಉದ್ದೇಶದಿಂದ,ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕೆನ್ನುವ ಮಹತ್ವಾಕಾಂಕ್ಷೆಯಿಂದ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಸ್ಥಾಪಿಸಲಾಗಿದೆ ಹಾಗೂ ಇದರ ಸದುಪಯೋಗವನ್ನು ಎಲ್ಲ ವಿದ್ಯಾರ್ಥಿಗಳು ಶಿಕ್ಷಕರ ಸಹಾಯದಿಂದ ಪಡೆಯ ಬೇಕು ಎಂದರು.ನಮ್ಮ ಸಂಸ್ಥೆಯು ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸರ್ವ ಸದಸ್ಯರು,ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಸ್ವಯಂಸ್ಪೂರ್ತಿ ಫೌಂಡೇಶನ್ ಪದಾಧಿಕಾರಿಗಳು ಹಾಗೂ ಊರವರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago