ಬೈಂದೂರು:ಆರಂಭಿಕ ಹಂತದಲ್ಲೆ ಕ್ಯಾನ್ಸರ್‍ಗೆ ಸೂಕ್ತ ಚಿಕಿತ್ಸೆಯನ್ನು ನೀಡುವುದರಿಂದ ಗುಣ ಪಡಿಸಲು ಸಾಧ್ಯವಿದೆ ಎಂದು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಅಂಕಾಲಜಿಯ ತಜ್ಞ ವೈದ್ಯ ಡಾ.ಹೇಮಂತ ಕುಮಾರ್ ಹೇಳಿದರು.
ಸಾಧನಾ ವೇದಿಕೆ ಮರವಂತೆ,ಪ್ರಾಥಮಿಕ ಆರೋಗ್ಯ ಕೇಂದ್ರ,ಆಸರೆ ಚಾರಿಟಬಲ್ ಟ್ರಸ್ಟ್, ಸ್ನೇಹಾ ಮಹಿಳಾ ಮಂಡಳಿ,ಹೋಲಿ ಫ್ಯಾಮಿಲಿ,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್,ಚೇತನಾ ಚಿಕಿತ್ಸಾಲಯ ಅವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಸಾಧನಾ ಸಮುದಾಯ ಭವನದಲ್ಲಿ ನಡೆದ ಕ್ಯಾನ್ಸರ್ ಕಾಯಿಲೆ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್ ಬಗ್ಗೆ ವಹಿಸಬೇಕಾದ ಎಚ್ಚರಿಕೆ ಬಗ್ಗೆ ಮಾಹಿತಿಯನ್ನು ನೀಡಲಾಯಿತು.ಉದಯಶಂಕರ ಭಟ್, ಮಂಜುನಾಥ ಮಧ್ಯಸ್ಥ,ಅನಿತಾ ಆರ್.ಕೆ,ಮಾನಸ ಅವಭೃತ,ದಯಾನಂದ ಬಳೆಗಾರ್, ಉಷಾ ಆಲ್ಮೇಡ,ಸೀತಾ ಜೋಗಿ,ಶ್ರೀಮತಿ ಆಚಾರ್ಯ ಕ್ಯಾನ್ಸರ್ ಕಾಯಿಲೆ ಕುರಿತು ಪ್ರಶ್ನೆಗಳನ್ನು ಕೇಳಿದರು.
ಸಾಧನಾ ಅಧ್ಯಕ್ಷ ಜೇಕ್ಸನ್ ಡಿಸೋಜ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಡಾ. ರೂಪಶ್ರೀ ಸ್ವಾಗತಿಸಿದರು.ಮರವಂತೆ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ.ಕೆ.ಗಣೇಶ ಭಟ್ಟ ಪ್ರಾಸ್ತವಿಕವಾಗಿ ಮಾತನಾಡಿದರು.ಸಾಧನಾ ಸದಸ್ಯ ಜಿ. ಸೀತಾರಾಮ ಮಡಿವಾಳ ವಂದಿಸಿದರು.ದೇವಿದಾಸ ಶ್ಯಾನುಭಾಗ್ ನಿರೂಪಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…