ಕುಂದಾಪುರ

ಮೂಡು ತಾರಿಬೇರು ಶಾಲೆಯಲ್ಲಿ ರಂಗ ಮಂಟಪ ನಿರ್ಮಾಣಕ್ಕೆ ಆಗ್ರಹ

Share

ಕುಂದಾಪುರ:ಬೈಂದೂರು ವಿಧಾನ ಸಭಾ ಕ್ಷೇತ್ರದ ಆಲೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಮೂಡು ತಾರಿಬೇರು ಶಾಲೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ತರಗತಿ ಕೋಣೆಗಳನ್ನು ಅವಲಂಬಿಸ ಬೇಕಾದ ಅನಿವಾರ್ಯತೆ ಇದೆ.ಮಕ್ಕಳ ಪ್ರತಿಭೆಯನ್ನು ಹೊರ ಜಗತ್ತಿಗೆ ತೋರ್ಪಡಿಸಲು ಸರಿಯಾದ ವೇದಿಕೆ ಇಲ್ಲದೆ ಇರುವುದರಿಂದ ರಂಗ ಮಂದಿರ ನಿರ್ಮಾಣ ಮಾಡ ಬೇಕ್ಕೆನ್ನುವುದು ಮಕ್ಕಳ ಪೋಷಕರ ಬೇಡಿಕೆ ಆಗಿದೆ.
ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಕ್ಕೆ ಹೊಂದಿಕೊಂಡಿರುವ ಕಾಂಡಚಿನ ಊರಾದ ಆಲೂರು ಗ್ರಾಮದ ಮೂಡು ತಾರಿಬೇರು ಶಾಲೆಯಲ್ಲಿ 1 ರಿಂದ 5 ನೇ ತರಗತಿ ವರೆಗೆ ಮಕ್ಕಳು ವಿದ್ಯಾಭ್ಯಾಸವನ್ನು ಮಾಡತ್ತಿದ್ದಾರೆ.ಶಾಲೆಯಲ್ಲಿ ಮಕ್ಕಳ ಸಂಖ್ಯೆ ಇದ್ದರು ಸರಿಯಾದ ರೀತಿಯಲ್ಲಿ ಮೂಲ ಸೌಕರ್ಯದ ಸೌಲಭ್ಯಗಳಿಲ್ಲ.ಪೇಟೆ ಪ್ರದೇಶದಿಂದ ಸರಿ ಸುಮಾರು 40.ಕಿಮೀ ನಷ್ಟು ದೂರ ವಿರುವ ಮೂಡು ತಾರಿಬೇರು ಭಾಗಕ್ಕೆ ಸರಕಾರಿ ಶಾಲೆಗಳೆ ಪ್ರಮುಖ ವಿದ್ಯಾ ಕೇಂದ್ರಗಳಾಗಿವೆ.ಕೃಷಿ ಮತ್ತು ಕೂಲಿ ಕಾರ್ಮಿಕರ ಮಕ್ಕಳೆ ಹೆಚ್ಚಾಗಿ ಹೊಗುವ ಸರಕಾರಿ ಶಾಲೆಗಳ ಉನ್ನತೀಕರಣಕ್ಕೆ ಸಂಬಂಸಿದ ಇಲಾಖೆ ಮತ್ತು ಸರಕಾರ ಹೆಚ್ಚಿನ ಒತ್ತನ್ನು ನೀಡಬೇಕಾಗಿದೆ.
ಕಾಂಡಚಿನ ಮಕ್ಕಳ ಪ್ರತಿಭೆಗೆ ಬೇಕಿದೆ ಪ್ರೆÇೀತ್ಸಾಹ:ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದತ್ಯೆಗಳನ್ನು ನೀಡಿದಾಗ ಮಾತ್ರ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆಯಲು ಸಾಧ್ಯವಿದೆ.ಮಕ್ಕಳ ಒಳಗೆ ಅಡಗಿರುವ ಪ್ರತಿಭೆ ಹೊರ ಬರಲು ಸೂಕ್ತವಾದ ವೇದಿಕೆ ಮುಖ್ಯವಾಗಿದೆ.ಮೂಡು ತಾರಿಬೇರು ಶಾಲೆಯಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ತರಗತಿ ಕೋಣೆಗಳ ಒಳಗೆ ಆಯೋಜನೆ ಮಾಡಬೇಕಾದ ಪರಿಸ್ಥಿತಿ.ಶಾಲೆ ಮಕ್ಕಳ ಹಿತದೃಷ್ಟಿಯಿಂದ ರಂಗ ಮಂಟಪ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕ್ಕೆನ್ನುವುದು ಗ್ರಾಮಸ್ಥರ ಆಗ್ರಹವಾಗಿದೆ.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago