ಕುಂದಾಪುರ:ನಾಡ ಗುಡ್ಡೆಯಂಗಡಿ ಎಸ್.ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಶುಭಾರಂಭ ಗೊಂಡಿರುವ ಅಂಬಾ ಶೋರೂಂ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಂಗಳವಾರ ಅದ್ದೂರಿಯಾಗಿ ನಡೆಯಿತು.
ಅಂಬಾ ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ಸ್ ಮತ್ತು ಫರ್ನಿಚರ್ ಶೋ ರೂಂ ಮಾಲೀಕರಾದ ವಿಶ್ವನಾಥ ಶೆಟ್ಟಿ ಕೋಟೆಮಕ್ಕಿ ಮಾತನಾಡಿ,
ನಾಡಗುಡ್ಡೆಯಂಗಡಿಯಲ್ಲಿ ಕಳೆದ 15 ವರ್ಷಗಳಿಂದ ಎಲೇಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್ಸ್ ಮತ್ತು ಫರ್ನಿಚರ್ ಉತ್ಪನ್ನಗಳ ಮಾರಾಟವನ್ನು ಮಾಡಿಕೊಂಡು ಬರಲಾಗುತ್ತಿದೆ,ಇದೀಗ ನೂತನ ವಿನ್ಯಾಸದೊಂದಿಗೆ ಶೋರೂಂ ಅನ್ನು ನಿರ್ಮಾಣ ಮಾಡಲಾಗಿದ್ದು
ನವರಾತ್ರಿ ಉತ್ಸವದ ಶುಭ ಸಂದರ್ಭದಲ್ಲಿ ಶುಭಾರಂಭಗೊಂಡಿದೆ.ಹಬ್ಬದ ಪ್ರಯುಕ್ತ ವಿಶೇಷವಾಗಿ ಗ್ರಾಹಕರಿಗೆ ರಿಯಾಯಿತಿ ಮತ್ತು ಆಕರ್ಷಕ ಬೆಲೆಯಲ್ಲಿ ಗ್ರಹ ಬಳಕೆ ವಸ್ತುಗಳನ್ನು ನೀಡಲಾಗುತ್ತಿದೆ.ನಮ್ಮ ನೆಚ್ಚಿನ ಗ್ರಾಹಕರು ನಮ್ಮನ್ನು ಪ್ರೋತ್ಸಾಹಿಸಬೇಕೆಂದು ಕೇಳಿಕೊಂಡರು.ಅಮರ ಶೆಟ್ಟಿ ಕೋಟೆಮಕ್ಕಿ ಮಾತನಾಡಿ,ರೀಯಾತಿ ದರದಲ್ಲಿ ವಿವಿಧ ರೀತಿಯ ಆಫರ್ ಗಳನ್ನು ನೀಡಲಾಗಿದೆ ಗ್ರಾಹಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು,ಎಂದಿನಂತೆ ಗ್ರಾಹಕರು ನಮಗೆ ಬೆಂಬಲ ನೀಡಬೇಕು ಎಂದರು.
ಅಂಬಾ ಸುಧಾಕರ ಶೆಟ್ಟಿ ನೂತನವಾಗಿ ನಿರ್ಮಿಸಿರುವ ಶೋರೂಂ ಅನ್ನು ಉದ್ಘಾಟಿಸಿ ಶುಭಹಾರೈಸಿದರು,ಎಸ್ ಪಿ ಪಾರ್ಕ್ ಮಾಲೀಕರಾದ ವಿಜಯ ಕುಮಾರ್ ಶೆಟ್ಟಿ, ಸತೀಶ ಶೆಟ್ಟಿ ಯಳೂರು,ಶಂಕರ ಶೆಟ್ಟಿ ಬೆಳ್ಳಾಡಿ, ಸತೀಶ ಎಂ ನಾಯಕ್, ಶರತ್ ಕುಮಾರ್ ಶೆಟ್ಟಿ ಕೋಟೆಮಕ್ಕಿ,ನಾಣು ಶೆಟ್ಟಿ ಸಂಸಾಡಿ, ಜೀವನ್ ಶೆಟ್ಟಿ, ಸುತನ್ ಶೆಟ್ಟಿ,ಸಂದೀಪ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…