ಕುಂದಾಪುರ

ನಾಡ:ಎಸ್ ಪಿ ಪಾರ್ಕ್ ನೂತನ ವಾಣಿಜ್ಯ ಸಂಕೀರ್ಣ ಉದ್ಘಾಟನೆ

Share

ಕುಂದಾಪುರ:ಸಕಲ ಸೌಲಭ್ಯಗಳೊಂದಿಗೆ
ನಾಡಗುಡ್ಡೆಯಂಗಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಎಸ್ ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಕಟ್ಟಡದ ಉದ್ಘಾಟನೆಯ ಕಾರ್ಯಕ್ರಮದ ಪ್ರಯುಕ್ತ ಪುರೋಹಿತರ ಮಾರ್ಗದರ್ಶನದಲ್ಲಿ ಸುದರ್ಶನ ಹೋಮ,ವಾಸ್ತು ಪೂಜೆ, ಗಣಹೋಮ,ಸತ್ಯನಾರಾಯಣ ಪೂಜೆ ಜರುಗಿತು.

ಮಾಹಾರಾಜ ಸ್ವಾಮಿ ಮರವಂತೆ ದೇವಸ್ಥಾನ ಆಡಳಿತ ಮೊಕ್ತೇಸರರಾದ ಸತೀಶ್ ಎಂ ನಾಯಕ್ ಮಾತನಾಡಿ,ನಾಡ ಗುಡ್ಡೆಯಂಗಡಿಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ
ಎಸ್ ಪಿ ಪಾರ್ಕ್ ನಲ್ಲಿ ಎಲ್ಲಾ ರೀತಿಯ ಮಳಿಗೆಗಳು ಕಾರ್ಯಾಚರಣೆ ಮಾಡುತ್ತಿರುವುದರಿಂದ ಒಂದೇ ಸೂರಿನಡಿ ಸಕಲ ಸೌಲಭ್ಯಗಳು ಸಿಗಲಿದೆ.ಗ್ರಾಮೀಣ ಪ್ರದೇಶದಲ್ಲಿ ವಾಣಿಜ್ಯ ಸಂಕೀರ್ಣಗಳು,ಸಣ್ಣ ಸಣ್ಣ ಕೈಗಾರಿಕೆಗಳು ನಿರ್ಮಾಣ ವಾಗುವುದ ರಿಂದ ಗ್ರಾಮೀಣಾಭಿವೃದ್ಧಿ ಆಗುವುದರ ಜೊತೆಗೆ ಸ್ಥಳೀಯವಾಗಿ‌ ಜನರಿಗೆ ಸೌಲಭ್ಯಗಳು ಸಿಗಲು ಸಹಕಾರಿ ಆಗುತ್ತದೆ ಎಂದು ಹೇಳಿದರು.ಎಸ್ ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದ ಮಾಲೀಕರಾದ ವಿಜಯ ಕುಮಾರ್ ಶೆಟ್ಟಿ ಮತ್ತು ದಂಪತಿಗಳ ಮಕ್ಕಳಾದ ಶ್ರುತಿ ಮತ್ತು ಪುನೀತ್ ಜಂಟಿಯಾಗಿ ಉದ್ಘಾಟಿಸಿದರು.
ಈ ಸಂದರ್ಭ ಎಸ್ ಪಿ ಪಾರ್ಕ್ ಮಾಲೀಕರಾದ ವಿಜಯಕುಮಾರ್ ಶೆಟ್ಟಿ,ಚಂದ್ರಾವತಿ ಶೆಟ್ಟಿ ಬಡಾಕೆರೆ,ದಿನೇಶ್ ಶೆಟ್ಟಿ,ಕರುಣಾಕರ ಶೆಟ್ಟಿ,ಸಂಜು ಶೆಟ್ಟಿ ವಕ್ಕೇರಿ,ಅನಿಲ್ ಶೆಟ್ಟಿ ವಕ್ಕೇರಿ,ಅನುಜಾ ಶೆಟ್ಟಿ ವಕ್ಕೇರಿ, ಹರೀಶ್ ಶೆಟ್ಟಿ ವಕ್ಕೇರಿ, ಕರುಣಾಕರ ಶೆಟ್ಟಿ ವಕ್ಕೇರಿ, ಶರತ್ ಕುಮಾರ್ ಶೆಟ್ಟಿ ಆಲೂರು,ವಿಶ್ವನಾಥ ಶೆಟ್ಟಿ ಮತ್ತು ಅವರ ಸ್ನೇಹಿತರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago