ಕುಂದಾಪುರ

ಅರಾಟೆಯಲ್ಲಿ ಖಾಸಗಿ ಬಸ್ ಪಲ್ಟಿ:20ಕ್ಕೂ ಅಧಿಕ ಮಂದಿಗೆ ಗಾಯ

Share

ಕುಂದಾಪುರ:ಅತಿ ವೇಗದಿಂದ ಸಾಗುತ್ತಿದ್ದ ಖಾಸಗಿ ಬಸ್‍ವೊಂದು ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66 ರ ಅರಾಟೆ ಎಂಬಲ್ಲಿ ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪಕ್ಕದ ರಸ್ತೆಯಲ್ಲಿ ಉರುಳಿ ಬಿದ್ದ ಘಟನೆ ಬುಧವಾರ ರಾತ್ರಿ ನಡೆದಿದೆ.ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆ ಸೇರಿದಂತೆ ಸುಮಾರು 20 ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು,ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಕುಂದಾಪುರದಿಂದ ಪ್ರಯಾಣಿಕರನ್ನು ತುಂಬಿಸಿ ಕೊಂಡು ರಾಷ್ಟ್ರೀಯ ಹೆದ್ದಾರಿ 66 ರ ಮುಳ್ಳಿಕಟ್ಟೆ ಮಾರ್ಗದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಬಸ್ ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ಕಳೆದು ಕೊಂಡು ಅರಾಟೆಯಲ್ಲಿ ಹೆಮಾಸ್ಟ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದ್ದೆ.ಅಪಘಾತದ ಹೊಡೆತಕ್ಕೆ ಬಸ್ ಸಂಪೂರ್ಣ ಜಖಂಗೊಂಡಿದೆ.ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ 20 ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದೆ.ಪವಾಡದೃಶವಶಾತ್ ಎಂಬಂತೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬಾರಿ ದೊಡ್ಡ ದುರಂತ ವೊಂದು ತಪ್ಪಿದ ಘಟನೆ ಅರಾಟೆಯಲ್ಲಿ ಸಂಭವಿಸಿದೆ.


ಹೆಮಾಸ್ಟ್ ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದು ಮುದ್ದಿಯಾಗಿದೆ.ಕ್ರೆನ್ ಸಹಾಯದಿಂದ ರಸ್ತೆ ಮೇಲೆ ಪಲ್ಟಿಯಾಗಿ ಬಿದ್ದ ಬಸ್‍ನ್ನು ತೆರವು ಮಾಡಲಾಯಿತು ರಾಷ್ಟ್ರೀಯ ಹೆದ್ದಾರಿ ಮೇಲೆ ಬಸ್ ಪಲ್ಟಿಯಾಗಿ ಬಿದ್ದಿದ್ದರಿಂದ ಅರಾಟೆಯಿಂದ ಹೆಮ್ಮಾಡಿ,ಅರಾಟೆಯಿಂದ ತ್ರಾಸಿ ವರೆಗೆ ಸುಮಾರು 3.ಕಿ.ಮೀ ವರೆಗೆ ಟ್ರಾಪಿಕ್ ಜಾಮ್ ಉಂಟಾಯಿತು.ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್‍ಐ ಹರೀಶ್ ಆರ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಟ್ರಾಪಿಕ್ ಜಾಮ್ ಸಡಿಲಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಸ್ಥಳೀಯರು ಸಹರಿಸಿದರು.ಇಬ್ರಾಹಿಂ ಗಂಗೊಳ್ಳಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲು ಸಹಕರಿಸಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago