ಕುಂದಾಪುರ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿಸಿ ಟ್ರಸ್ಟ್ ಬೈಂದೂರು,ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಕೃಷಿ ತರಬೇತಿ ಕಾರ್ಯಕ್ರಮ ಹೊಸಾಡು ಗ್ರಾಮದ ಕಮ್ಮಾರ ಕೊಡ್ಲು ಹಿಜಾಣ ಚಿಕ್ಕು ದೇವಸ್ಥಾನದ ವಠಾರದಲ್ಲಿ ಬುಧವಾರ ನಡೆಯಿತು.
ಒಕ್ಕೂಟದ ಮಾಜಿ ಅಧ್ಯಕ್ಷೆ ವಸಂತಿ ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿದ್ದರು,ಮೂಕಾಂಬಿಕಾ ಭತ್ತ ಬೆಳೆಗಾರ ಸಂಘ ಹೊಸಾಡು ಒಕ್ಕೂಟದ ನಿರ್ದೇಶಕ ಶಿವರಾಮ ಶೆಟ್ಟಿ,ಕೃಷಿ ಮೇಲ್ವಿಚಾರಕ ರಾಜು,ಧ.ಗ್ರಾ.ಯೋಜನೆ ಪಡುಕೋಣೆ ವಲಯ ಮೇಲ್ವಿಚಾರಕಿ ಪಾರ್ವತಿ,ಯಂತ್ರಶ್ರೀ ಸಹಾಯಕ ಗಣೇಶ ಉಪಸ್ಥಿತರಿದರು.ಮೂಕಾಂಬಿಕಾ ಭತ್ತ ಬೆಳೆಗಾರ ಸಂಘ ಸಿಇಒ ಅನಿಲ್ ಸಾವಯವ ಗೊಬ್ಬರ,ರಸಗೊಬ್ಬರ ಬಳಕೆ ಹಾಗೂ ಯಂತ್ರ ಶ್ರೀ ಬೇಸಾಯದ ಬಗ್ಗೆ ಮಾಹಿತಿಯನ್ನು ನೀಡಿದರು.ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆ ಮಾಡಲಾಯಿತು,ತರಕಾರಿ ಬೀಜಗಳನ್ನು ವಿತರಿಸಲಾಯಿತು.ಪುಷ್ಪಲತಾ ಸ್ವಾಗತಿಸಿ,ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…