ಕುಂದಾಪುರ:ತಾಲೂಕಿನ ನೂಜಾಡಿ ಗ್ರಾಮದ ಬ್ರಹ್ಮೇರಿ ನರಸಿಂಹ ದೇವಸ್ಥಾನದ ಬಳಿ ಸರಕಾರಿ ಹಾಡಿಯಲ್ಲಿ ಕೋಳಿ ಜುಗಾರಿ ಆಟ ಆಡುತ್ತಿದ್ದ ಅಡ್ಡಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಠಾಣೆಯ ಪೆÇಲೀಸರು ಆಪಾದಿತರಾದ ಸಂದೇಶ ಪೂಜಾರಿ,ಅನಿಲ್ ಮೊಗವೀರ,ದಿನೇಶ ಪೂಜಾರಿ,ಸುಕುಮಾರ ಪೂಜಾರಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಗಂಗೊಳ್ಳಿ ಪೆÇಲೀಸ್ ಠಾಣೆಯ ಪಿಎಸ್‍ಐ ಹರೀಶ್.ಆರ್ ಮತ್ತು ಸಿಬ್ಬಂದಿಗಳಾದ ಚಂದ್ರು,ರಾಘವೇಂದ್ರ ಪೂಜಾರಿ,ಕೇಶವ,ಸಂದೀಪ್ ಮತ್ತು ಮಾಲಿಂಗ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಕೋಳಿ ಜುಗಾರಿ ಆಟಕ್ಕೆ ಬಳಸಿದ ಸುಮಾರು 2500.ರೂ ಮೊತ್ತದ ಐದು ಕೋಳಿ ಹುಂಜ,2120.ರೂ ನಗದು ಹಾಗೂ ಆಟೋ ರಿಕ್ಷಾ,ಹೊಂಡಾ ಶೈನ್ ಮೋಟಾರು ಬೈಕ್ ಸೇರಿ ಒಟ್ಟು 1,34,120.ರೂ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…