ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಪರ್ಣಿಕಾ ಸಂಜೀವಿನಿ ಒಕ್ಕೂಟ ಹಾಗೂ ಗ್ರಾಮ ಮಟ್ಟದ ವಾರ್ಡ್ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಹಾಗೂ ವಾರ್ಷಿಕ ಮಹಾಸಭೆ ಕಾರ್ಯಕ್ರಮ ಹೊಸಾಡು ಪಂಚಾಯತ್ ಸಭಾಭವನದಲ್ಲಿ ಬುಧವಾರ ನಡೆಯಿತು.
ಸೌಪರ್ಣಿಕಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಂದನಾ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು,ತಾಲೂಕು ಒಕ್ಕೂಟ ಅಧ್ಯಕ್ಷೆ ವಿಜಯ ಗಾಣಿಗ,ತಾಲೂಕು ಕಾರ್ಯಕ್ರಮದ ವ್ಯವಸ್ಥಾಪಕ ಯತೀಶ್,ಪಿಡಿಒ ಪಾರ್ವತಿ,ಹೊಸಾಡು ಆಡಳಿತಾಧಿಕಾರಿ ರಘುರಾಮ ಶೆಟ್ಟಿ,ವಾರ್ಡ್ ಅಧ್ಯಕ್ಷೆ ರೇಖಾ,ಒಕ್ಕೂಟದ ಕಾರ್ಯದರ್ಶಿ ಪಲ್ಲವಿ,ಆಶಾ ಕಾರ್ಯಕರ್ತೆಯರಾದ ಪ್ರೇಮಾ ಬಳೆಗಾರ್,ಪ್ರೇಮಾ ಭಂಡಾರಿ ಉಪಸ್ಥಿತರಿದ್ದರು.ಒಕ್ಕೂಟದ ಅಧ್ಯಕ್ಷರಾಗಿ ಯಶೋಧ ವಳನಾಡು,ಉಪಾಧ್ಯಕ್ಷೆ ಸುಮಿತ್ರಾ,ಕಾರ್ಯದರ್ಶಿ ವೀಣಾ ನಾಯಕ್,ಜೊತೆ ಕಾರ್ಯದರ್ಶಿ ಮೀನಾ,ಕೋಶಾಧಿಕಾರಿಯಾಗಿ ಜಯಶ್ರೀ ದೇವಾಡಿಗ ಆಯ್ಕೆಯಾದರು.ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು.ಸವಿತಾ ಸ್ವಾಗತಿಸಿದರು.ಚೈತ್ರಾ ವಾರ್ಷಿಕ ವರದಿ ಮಂಡಿಸಿದರು.ವಸಂತಿ ದೇವಾಡಿಗ ನಿರೂಪಿಸಿದರು.ವಿಮಲ ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…