ಬ್ರಹ್ಮಾವರ:ತನು ಕನ್ನಡ ಮನ ಕನ್ನಡ ಎಂಬ ಕವಿ ವಾಣಿಯಂತೆ ಕನ್ನಡದ ಕುರಿತು ವಿಶೇಷವಾದ ಅಭಿಮಾನವನ್ನು ಹೊಂದಿರುವ ಹೆಮ್ಮೆಯ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಬುಧವಾರ ಆಚರಿಸಲಾಯಿತು.ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಕನ್ನಡ ಸಮೂಹಗೀತೆ,ಕನ್ನಡ ಭಾಷಣ ಸ್ಪರ್ಧೆಯನ್ನು ನಡೆಸಲಾಯಿತು. ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿಯಾದ ಶ್ರೀಮತಿ ಮಮತಾ ಮತ್ತು ಕಾಲೇಜಿನ ಪ್ರಿನ್ಸಿಪಾಲ್ ಡಾ.ಸೀಮಾ ಜಿ ಭಟ್, ವೈಸ್ ಪ್ರಿನ್ಸಿಪಾಲ್ ಶ್ರೀಮತಿ ಸುಜಾತ ,ಸಾಂಸ್ಕೃತಿಕ ಸಮಿತಿಯ ಮುಖ್ಯಸ್ಥರಾದ ಶ್ರೀಮತಿ ರಾಝಿಕಾ,ಕನ್ನಡ ಉಪನ್ಯಾಸಕರಾದ ನವೀನ್ ಕುಮಾರ್ ,ಹಿಂದಿ ಉಪನ್ಯಾಸಕರಾದ ಉದಯ್ ಕುಮಾರ್ ಹಾಗೂ ಎಲ್ಲಾ ಉಪನ್ಯಾಸಕರು, ಉಪನ್ಯಾಸಕೇತರರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕನ್ನಡ ವಿಭಾಗದ ಮುಖ್ಯಸ್ಥೆ ಉಪನ್ಯಾಸಕಿ ಶ್ರೀಮತಿ ಅನುಪಮ ಪಿ ಭಟ್ ನಿರೂಪಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…