ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಖೇಲೋ ಜನತಾ ವಾರ್ಷಿಕ ಕ್ರೀಡಾಕೂಟ- 2023 ಕಾರ್ಯಕ್ರಮ ಗುರುವಾರ ಅದ್ದೂರಿಯಾಗಿ ನಡೆಯಿತು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಪ್ರಿನ್ಸಿಪಾಲ್ ಗಣೇಶ್ ಮೊಗವೀರರವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,ಕಾಲೇಜಿನ ಕ್ರೀಡಾ ಚಟುವಟಿಕೆಗಳ ಬಗ್ಗೆ ವಿವರಿಸಿದರು.
ಉಪ್ಪುಂದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ಶೆಟ್ಟಿ ಆವರು ಗೌರವ ರಕ್ಷೆಯನ್ನು ಸ್ವೀಕರಿಸಿ,ಕ್ರೀಡಾಜ್ಯೋತಿಯನ್ನು ಬೆಳಗಿಸಿ ಮಾತನಾಡಿ, ವಿದ್ಯಾರ್ಥಿ ಪ್ರತಿಭೆಗಳಿಗೆ ಕ್ರೀಡಾಕೂಟಗಳು ಅದ್ಭುತವಾದ ವೇದಿಕೆಯಾಗಿದೆ ಜನತಾ ಪದವಿಪೂರ್ವ ಕಾಲೇಜಿನ ಕ್ರೀಡಾ ಸಾಧನೆಯನ್ನು ಕೊಂಡಾಡಿ ಶುಭ ಹಾರೈಸಿದರು.
ಪ್ರಗತಿ ಮಹಿಳಾ ವಿವಿಧೋದ್ದೇಶ ಕೋ-ಆಪರೇಟಿವ್ ಸೊಸೈಟಿ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಕುಲಾಲ್ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ,ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಕ್ರೀಡೆಗಳ ಪಾತ್ರ ಮಹತ್ತರವಾದದ್ದು ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ,ಬೋಧಕ/ಬೋಧಕೇತರ ವೃಂದದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಪ್ರಾರ್ಥಿಸಿದರು,ಉಪನ್ಯಾಸಕ ಉದಯ್ ನಾಯ್ಕ ಕಾರ್ಯಕ್ರಮ ನಿರೂಪಿಸಿದರು,ದೈಹಿಕ ಶಿಕ್ಷಣ ಉಪನ್ಯಾಸಕರಾದ ಉಮೇಶ್ ನಾಯ್ಕ ವಂದಿಸಿದರು.
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…