ಕುಂದಾಪುರ

ಸೇನಾಪುರ:ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಆಗ್ರಹಿಸಿ ಪ್ರತಿಭಟನೆ

Share

ಕುಂದಾಪುರ:ದಿನದಿಂದ ದಿನಕ್ಕೆ ರೈಲು ಪ್ರಯಾಣ ಎನ್ನುವುದು ಜನರಿಗೆ ಬಹಳಷ್ಟು ಅಗತ್ಯವಾಗಿರುವ ಮೂಲ ಸೌಕರ್ಯಗಳಲ್ಲಿ ಒಂದಾಗಿದೆ.ಕರಾವಳಿ ಭಾಗದ ಜನರ ಜೀವನದ ಕೊಂಡಿ ಆಗಿರುವ ಕೊಂಕಣ ರೈಲು ಸೇವೆ ಎನ್ನುವುದು ಸ್ಥಳೀಯ ಜನರಿಗೆ ಮರಿಚಿಕೆ ಆಗಿದ್ದು ಸೇನಾಪುರ ರೈಲು ನಿಲ್ದಾಣದಲ್ಲಿ ಮುಂಬಯಿ ಮತ್ತು ಬೆಂಗಳೂರು ಎಕ್ಸ್‌ಪ್ರೆಸ್ ರೈಲು ನಿಲುಗಡೆ ಮಾಡಲು ಸಂಸದರ ಜತೆ ಸೇರಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಕೊಂಕಣ ರೈಲ್ವೆ ಹೋರಾಟ ಸಮಿತಿ ಸೇನಾಪುರ ವತಿಯಿಂದ ಭಾನುವಾರ ಸೇನಾಪುರ ರೈಲ್ವೆ ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಹೋರಾಟ ಸಮಿತಿಯಿಂದ ಮನವಿಯನ್ನು ಸ್ವೀಕರಿಸಿ ಮಾತನಾಡಿದರು.
ಸೇನಾಪುರದಲ್ಲಿ ಮುಂಬಯಿ ಮತ್ತು ಬೆಂಗಳೂರುಗೆ ಸಂಪರ್ಕ ಕಲ್ಪಿಸುವ ರೈಲು ನಿಲುಗಡೆ ಗೊಂಡರೆ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಸುಮಾರು 25 ಗ್ರಾಮ ಪಂಚಾಯತ್ ವ್ಯಾಪ್ತಿ ಪ್ರದೇಶದ ಜನರಿಗೆ ಅನುಕೂಲವಾಗಲಿದೆ.ಗ್ರಾಮೀಣ ಭಾಗದ ಜನರ ಎರಡು ದಶಕಗಳ ಕಾಲದ ಹೋರಾಟದ ಫಲ ಶೀಘೃ ದೊರಕಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.


ಮಾಜಿ ತಾ.ಪಂ ಅಧ್ಯಕ್ಷ ಶಂಕರ ಶೆಟ್ಟಿ ಬೆಳ್ಳಾಡಿ ಮಾತನಾಡಿ,ಕೋಟ್ಯಾಂತರ ರೂಪಾಯಿ ಹಣ ವಿನಿಯೋಗ ಮಾಡಿ ಡಬ್ಬಲ್ ಟ್ರ್ಯಾಕ್ ಹಳಿ ನಿರ್ಮಾಣ ಮಾಡಿದ್ದರು ಯೋಜನೆಯ ಸದ್ಬಳಕೆ ಇನ್ನೂ ಕೂಡ ಆಗಿಲ್ಲ. ದಶಕಗಳಿಂದ ಹಲವಾರು ಹೋರಾಟಗಳನ್ನು ಮಾಡಿದ್ದರು ಸರಕಾರ ಯಾವುದೇ ರೀತಿ ಸ್ಪಂದನೆ ಮಾಡದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೊಡ್ಡ ರೀತಿಯ ಅನ್ಯಾಯ ಜನರಿಗೆ ಆಗಿದೆ.ಗ್ರಾಮೀಣ ಭಾಗದ ಜನರಿಗೆ ಬಹುಪಯೋಗಿ ಆಗಿರುವ ಮುಂಬಯಿ ಮತ್ತು ಬೆಂಗಳೂರು ರೈಲು ನಿಲುಗಡೆ ಜನಪ್ರತಿನಿಧಿಗಳು ಮತ್ತು ಸರಕಾರ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದರು.ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರೀತಿಯ ರಸ್ತೆಗಳನ್ನು ಅಭಿವೃದ್ಧಿಗೊಳಿಸಬೇಕೆಂದು ಒತ್ತಾಯಿಸಿದರು.
ಮಾಜಿ ತಾ.ಪಂ ಅಧ್ಯಕ್ಷ ಪ್ರವೀಣ್ ಶೆಟ್ಟಿ ಕಡಿಕೆ ಮಾತನಾಡಿ,ನಮ್ಮ ಹೋರಾಟಕ್ಕೆ ಸಂಸದರು ಮತ್ತು ಶಾಸಕರು ಸ್ಪಂದನೆ ಮಾಡಿರುವುದು ಎರಡು ದಶಕಗಳ ಕಾಲದ ಬೇಡಿಕೆ ಈಡೇರಿಕೆ ಆಗುವ ಆಶಾಭಾವನೆ ಮೂಡಿದೆ ಎಂದರು.
ಮಾಜಿ ತಾ.ಪಂ ಅಧ್ಯಕ್ಷ ಮಹೇಂದ್ರ ಪೂಜಾರಿ,ನಾಡ ಪಂಚಾಯಿತಿ ಮಾಜಿ ಅಧ್ಯಕ್ಷ ದಿನೇಶ್ ಶೆಟ್ಟಿ,ಆಲೂರು ಪಂಚಾಯಿತಿ ಮಾಜಿ ಉಪಾಧ್ಯಕ್ಷ ರವಿ ಶೆಟ್ಟಿ ಆಲೂರು,ಹಕ್ಲಾಡಿ ಮಾಜಿ ಅಧ್ಯಕ್ಷ ಚೇತನ್ ಮೊಗವೀರ,ಮಾಜಿ ತಾ.ಪಂ ಸದಸ್ಯ ಸುರೇಂದ್ರ ಖಾರ್ವಿ ಗಂಗೊಳ್ಳಿ ಮತ್ತು ಕೆನಡಿ ಪಿರೇರಾ,ಕಡಿಕೆ ಪ್ರವೀಣ್ ಕುಮಾರ್ ಶೆಟ್ಟಿ.ಪಂಚಾಯಿತಿ ಸದಸ್ಯ ಬಸವ ನಾಯ್ಕ್,ಗ್ರಾಮಸ್ಥರು,ಹೋರಾಟ ಸಮಿತಿ ಸದಸ್ಯರು,ರೈಲ್ವೆ ಇಲಾಖೆ ರೀಜನಲ್ ಮ್ಯಾನೇಜರ್ ಬಾಲಸಾಹೇಬ್ ನಿಕ್ಕಮ್,ರೀಜನಲ್ ಟ್ರಾಫಿಕ್ ಮ್ಯಾನೇಜರ್ ವಿನಯ್ ಕುಮಾರ್,ಜನ ಸಂಪರ್ಕ ಅಧಿಕಾರಿ ಸುಧಾ ಕೃಷ್ಣಮೂರ್ತಿ,ಟೇಷನ್ ಮಾಸ್ಟರ್ ಸುಕುಮಾರ ಶೆಟ್ಟಿ ಉಪಸ್ಥಿತರಿದ್ದರು.ಹೋರಾಟ ಸಮಿತಿ ವತಿಯಿಂದ ಬೈಂದೂರು ಶಾಸಕರಿಗೆ ಮತ್ತು ರೈಲ್ವೆ ಇಲಾಖೆ ರೀಜನಲ್ ಮ್ಯಾನೇಜರ್‍ಗೆ ಮನವಿಯನ್ನು ನೀಡಲಾಯಿತು.ಗೋಪಾಲಕೃಷ್ಣ ನಾಡ ಸ್ವಾಗತಿಸಿ,ವಂದಿಸಿದರು

ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಂಸದ ಬಿ.ವೈ.ರಾಘವೇಂದ್ರ ಅವರು ಆಡಿಯೋ ಕಾನ್ಫರೇನ್ಸ್ ಮೂಲಕ ಪ್ರತಿಭಟನಾ ಸಭೆಯನ್ನುದ್ದೆಶೀಸಿ ಮಾತನಾಡಿದ,ಸೇನಾಪುರ ರೈಲು ನಿಲ್ದಾಣದಲ್ಲಿ ಮುಂಬಯಿ ಮತ್ತು ಬೆಂಗಳೂರು ಎಕ್ಸ್‌ಪ್ರೆಸ್ ರೈಲನ್ನು ನಿಲುಗಡೆ ಮಾಡಲು ಎಲ್ಲಾ ರೀತಿ ಕ್ರಮಗಳನ್ನು ಕೈಗೊಳ್ಳಲಾಗುವುದು.ಬೈಂದೂರು ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ಧಿಗೊಳಿಸಿದಂತೆ ಸೇನಾಪುರ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ಧಿಗೊಳಿಸಲಾಗುವುದು.ನಷ್ಟದಲ್ಲಿರುವ ಕೊಂಕಣ ರೈಲು ನಿಗಮವನ್ನು ಸದನ ರೈಲ್ವೆಗೆ ಮರ್ಜ್ ಮಾಡಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

(ಮಳೆಯನ್ನು ಲೆಕ್ಕಿಸದೆ ಮಹಿಳೆಯರು ಕೊಡೆಯನ್ನು ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದರು)

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago