ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರ ಕೋಟೇಶ್ವರದ ಗುರುಪ್ರಸಾದ್ ಹೋಟೆಲ್ ಸರ್ಕಲ್ ಸಮೀಪ ಭಾನುವಾರ ಉಡುಪಿಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಮೀನು ಸಾಗಾಟದ ಇನ್ಸುಲೇಟರ್ ಕಂಟೈನರ್ ಲಾರಿಯೊಂದು ವೀಲ್ ಜಾಮ್ ಆಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರು ಹಾಗೂ ಸಮೀಪದಲ್ಲೇ ನಿಂತಿದ್ದ ಸರಕಾರಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಒಟ್ಟು 3 ವಾಹನಗಳು ಜಖಂಗೊಂಡಿವೆ.ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ ಕುಟುಂಬವೊಂದು ಕೋಟೇಶ್ವರದ ಕಿನಾರ ಬೀಚ್ ವೀಕ್ಷಿಸಿ ವಾಪಸಾಗುವ ಸಂದರ್ಭ ಕಿನಾರ ರಸ್ತೆಯಿಂದ ಸರ್ವಿಸ್ ರಸ್ತೆ ಮೂಲಕ ರಾಷ್ಟ್ರೀಯ ಹೆದ್ದಾರಿ ಎಂಟ್ರಿಯಾಗಲು ಕಾರನ್ನು ನಿಲ್ಲಿಸಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಸಮೀಪದಲ್ಲಿಯೇ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದ್ದಸರಕಾರಿ ಬಸ್ಸಿಗೂ ಲಾರಿ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಬಸ್ ಪ್ರಯಾಣಿಕರಿಗೆ, ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳೇನಾಗಿಲ್ಲ.ಘಟನೆಯಲ್ಲಿ ಲಾರಿ ಚಾಲಕ ಸುಮಾರು ಹೊತ್ತು ಲಾರಿಯೊಳಗೆ ಸಿಲುಕಿದ್ದು, ಸ್ಥಳೀಯರ ಕಾಯಾಚರಣೆ ಮೂಲಕ ಹೊರ ತಂದು ಆಸ್ಪತ್ರೆಗೆ ಕರೆದೊಯ್ಯಲಾಯಿತು.ಬಸ್ ಹಾಗೂ ಕಾರಿನಲ್ಲಿದ್ದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆಕರೆದೊಯ್ಯಲು ಸ್ಥಳೀಯರು ಸಹಕರಿಸಿದರು.ಅಪಘಾತದಲ್ಲಿ ಲಾರಿ ಮತ್ತು ಕಾರಿನ ಮುಂಭಾಗ,ಕಾರಿನ ಹಿಂಭಾಗ ಜಖಂಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ತಡೆಬೇಲಿ ಮತ್ತು ಡಿವೈಡರ್‌ಗಳಿಗೂ ಹಾನಿಯಾಗಿದೆ. ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…