ಬೆಂಗಳೂರು:ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ , ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ಶಿಕಾರಿಪುರ ಶಾಸಕರಾದ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕೊನೆ ಗೊಂಡು ಆರು ತಿಂಗಳ ಬಳಿಕ ಹಲವು ಲೆಕ್ಕಾಚಾರ ಹಾಗೂ ಜಾತಿ ಆಧಾರದ ಮೇಲೆ ಲಿಂಗಾಯತ ಸಮುದಾಯದ ಯುವ ಮುಖಂಡ ಬಿ.ವೈ ವಿಜೇಂದ್ರ ಅವರಿಗೆ ಪಕ್ಷ ಮಣೆ ಹಾಕಿದೆ.ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಮುಂಚಿತವಾಗಿ ಆಗಿರುವ ಈ ಬದಲಾವಣೆ ಪಕ್ಷದ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…