ಹೆಮ್ಮಾಡಿ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು,ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ ಬೈಂದೂರು ಅವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ಭುತವಾದ ಸಾಧನೆಯನ್ನು ಮಾಡಿದ್ದಾರೆ.ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಇಂಪಾ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆ ಯಾಗಿದ್ದಾರೆ.ಕನ್ನಡ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಎಚ್.ವರ್ಷಾ ರವಿಶಂಕರ್ ದ್ವಿತೀಯ ಸ್ಥಾನ, ಆಶು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ತ್ರತೀಯ ಸ್ಥಾನ,ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮೆರ್ಲಿಯಾ ತ್ರತೀಯ ಸ್ಥಾನ,ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿ ವಿಘ್ನೇಶ್ ತ್ರತೀಯ ಸ್ಥಾನವನ್ನು ಪಡೆದಿರುತ್ತಾರೆ.ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವ್ರಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…