ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಸಂಭ್ರಮದಿಂದ ಆಚರಣೆ
ಬ್ರಹ್ಮಾವರ:ದೀಪವೆಂಬುದು ಅಂಧಕಾರವನ್ನು ಕಳೆದು ಬೆಳಕಿನೆಡೆಗೆ ಸಾಗುವ ದಿವ್ಯಮಾರ್ಗ.ಸಂಸ್ಕೃತಿ, ಸಂಪ್ರದಾಯ,ಆಚರಣೆಯ ಕುರಿತು ಅಭಿಮಾನವನ್ನು ಹೊಂದಿರುವ ಹೆಮ್ಮೆಯ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರ ತರುವ ಸಲುವಾಗಿ ರಂಗೋಲಿ ಸ್ಪರ್ಧೆ,ಗೂಡುದೀಪ ತಯಾರಿಸುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿಯಾದ ಶ್ರೀಮತಿ ಮಮತಾ,ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











































































































































































































































































































































































































































































































































































































































































































































































































































































































































































































































































































































































































































































































































































































































































