ಕುಂದಾಪುರ

ಮೀನುಗಾರರಿಗೆ ಸುರಕ್ಷತೆಯನ್ನು ಕೊಡಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ

Share

ಕುಂದಾಪುರ:ಅಗ್ನಿ ಅನಾಹುತದಿಂದ ಬೋಟ್ ಮತ್ತು ಬಲೆಗಳು ನಾಶವಾಗಿದ್ದರಿಂದ ಹೊಟ್ಟೆ ಪಾಡಿಗಾಗಿ ದುಡಿಯುತ್ತಿರುವ ನೂರಾರು ಮೀನುಗಾರಿಕಾ ಕುಟುಂಬಗಳು ಬೀದಿಗೆ ಬಂದಿದೆ.ಈಗಾಗಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮೀನುಗಾರರಿಗೆ ಆದತಂಹ ಸಂಕಷ್ಟದ ಬಗ್ಗೆ ಶಾಸಕರ ಜತೆ ಸೇರಿ ಮನವಿಯನ್ನು ಸಲ್ಲಿಸಲಾಗಿದೆ.ಜಿಲ್ಲಾಧಿಕಾರಿಗಳ ಜತೆಗೂ ಮಾತನಾಡಲಾಗಿದ್ದು ಸೂಕ್ತ ಪರಿಹಾರವನ್ನು ನೀಡುವ ದೃಷ್ಟಿಯಿಂದ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು.ಜೀವನದ ಹಂಗನ್ನು ಮರೆತು ಸಮುದ್ರದ ಮಧ್ಯೆ ಬದುಕಿಗಾಗಿ ಹೋರಾಟ ಮಾಡುತ್ತಿರುವ ಮೀನುಗಾರರಿಗೆ ಸುರಕ್ಷತೆಯನ್ನು ಕೊಡಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಕುಂದಾಪುರ ತಾಲೂಕಿನ ಗಂಗೊಳ್ಳಿ ಮ್ಯಾಂಗನೀಸ್ ರಸ್ತೆ ವಾರ್ಪ್ ಬಂದರಿನಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅನಾಹುತದ ಘಟನೆಯ ಸ್ಥಳಕ್ಕೆ ಗುರುವಾರ ಭೇಟಿ ನೀಡಿ,ಪರಿಶೀಲನೆ ನಡೆಸಿದ ಅವರು ಮೀನುಗಾರರ ಜತೆ ಮಾತನಾಡಿದರು.
ಈ ರೀತಿ ಆಘಾತಗಳು ಮುಂದೆ ಮರುಕಳಿಸದಂತೆ ಜಾಗೃತಗೊಳ್ಳುವ ದೃಷ್ಟಿಯಿಂದ ಕರಾವಳಿ ತೀರದ ಮೀನುಗಾರಿಕಾ ಪ್ರದೇಶಗಳಲ್ಲಿ ಪಂಪ್ ಹೌಸ್ ನಂತಹ ವಿಶೇಷವಾದ ಯೋಜನೆಗಳನ್ನು ಜಾರಿಗೊಳಿಸಲು ಕೇಂದ್ರ ಸರಕಾರಕ್ಕೆ ಮನವಿಯನ್ನು ಸಲ್ಲಿಸಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು.ಮೀನುಗಾರರ ಹಿತದೃಷ್ಟಿಯಿಂದ ರಾಜ್ಯ ಸರಕಾರವು ಕೂಡ ಬಂದರು ಇಲಾಖೆ ಮುಖಾಂತರ ವಿಶೇಷವಾದ ರೀತಿಯಲ್ಲಿ ಗಮನವನ್ನು ನೀಡಬೇಕಾಗಿದೆ ಎಂದು ಹೇಳಿದರು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ,ಗಂಗೊಳ್ಳಿ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ ಖಾರ್ವಿ,ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್,ಸದಾನಂದ ಉಪ್ಪಿನಕುದ್ರು,ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ ಶೆಟ್ಟಿ,ಸುರೇಶ ಶೆಟ್ಟಿ ಉಪ್ಪÅಂದ,ಸದಾಶಿವ ಖಾರ್ವಿ,ರಮೇಶ್ ಕುಂದರ್,ಸುರೇಂದ್ರ ಖಾರ್ವಿ,ಗಂಗೊಳ್ಳಿ ಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಖಾರ್ವಿ ಲೈಟ್‍ಹೌಸ್,ಹರೀಶ್ ಮೇಸ್ತ,ದಿವಾಕರಶೆಟ್ಟಿ,ಮೀನುಗಾರರು,ಬಿಜೆಪಿ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago