ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಸಂಗ್ರಹಣಾ ವಾಹನದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಒಡೆಯರಮಠ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಶುಕ್ರವಾರ ನಡೆಯಿತು.ಭವ್ಯ ಮೆರವಣಿಗೆ ಮೂಲಕ ಅತಿಥಿಗಳನ್ನು ಬರಮಾಡಿಕೊಳ್ಳಲಾಯಿತು.ಕೊಂಬು ಕಹಳೆ ವಾದನ ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತು.
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಅವರು ಹಾಲು ಸಂಗ್ರಹಣಾ ಸಂಚಾರಿ ವಾಹನವನ್ನು
ಉದ್ಘಾಟಿಸಿ ಮಾತನಾಡಿ,ಹಳ್ಳಿ ಭಾಗದ ಜನರು ಕೃಷಿ ಮತ್ತು ಹೈನುಗಾರಿಕೆಯಲ್ಲಿ ತೊಡಗಿ ಕೊಳ್ಳುವುದರಿಂದ ಬದುಕು, ಸಂಸ್ಕೃತಿ ಮತ್ತು ಜೀವನ ಪದ್ಧತಿ ಉಳಿಯುತ್ತದೆ.ಹೈನುಗಾರಿಕೆಯನ್ನು ಉದ್ಯೋಗವನ್ನಾಗಿ ಪರಿಗಣಿಸಿದಾಗ ಮಾತ್ರ ಲಾಭಾಂಶಗಳಿಸಲು ಸಾಧ್ಯವಿದೆ ಎಂದು ಹೇಳಿದರು.ಹಳ್ಳಿಗಳಲ್ಲಿ ಕ್ಷೀರ ಕ್ರಾಂತಿ ಆಗಬೇಕೆಂದರು.ಹಾಲು ಸಂಗ್ರಹಣಾ ಸಂಚಾರಿ ವಾಹನದಿಂದ ಹೈನುಗಾರಿಕೆಯಲ್ಲಿ ತೊಡಗಿ ಕೊಂಡಿರುವ ಹಿರಿಯ ಮಹಿಳೆಯರಿಗೆ ಸಾಕಷ್ಟು ಅನುಕೂಲ ವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರು ಸಾಕಾಣಿಕೆಗೆ ಉತ್ತೇಜನ ಹಾಗೂ ದೂರದ ಊರುಗಳಿಂದ ದನಗಳನ್ನು ಖರೀದಿಸಲು ರೈತರಿಗೆ ಧನಸಹಾಯವನ್ನು ನೀಡುವಂತಹ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂದು ಹೇಳಿದರು.ಹಾಲಿಗೆ ಕನಿಷ್ಠ 50.ರೂ ಮಾರುಕಟ್ಟೆ ಮೌಲ್ಯ ರೈತರಿಗೆ ದೊರಕುವಂತೆ ಆಗಬೇಕು ಇದರಿಂದ ಹಾಲು ಉತ್ಪಾದನೆಯನ್ನು ಕೂಡ ಹೆಚ್ಚಿಸಬಹುದು ರೈತರಿಗೂ ಸಹಾಯವಾಗುತ್ತದೆ ಎಂದರು.
ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ನಿರ್ದೇಶಕರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಶುಭಾಸಂಶನೆಗೈದು ಮಾತನಾಡಿ,ಸಹಕಾರಿ ಸಂಘ ಸಂಸ್ಥೆಗಳು ಯಾವತ್ತೂ ಲಾಭದ ನಿರೀಕ್ಷೆಯಿಂದ ಕೆಲಸ ಮಾಡದೆ ಹೈನುಗಾರರ ಒಳಿತಿಗಾಗಿ ಶ್ರಮಿಸುತ್ತಿದೆ.ಸಹಕಾರಿ ಕ್ಷೇತ್ರದ ಬೆಳವಣಿಗೆಯನ್ನು ನೋಡಿದಾಗ ಹಿರಿಯರ ಶ್ರಮವನ್ನು ನೆನೆಯ ಬೇಕಾಗುತ್ತದೆ.ಹಾಲಿನ ಕ್ಷೇತ್ರ ಎನ್ನುವುದು ಅದ್ಭುತವಾದ ಕ್ಷೇತ್ರವಾಗಿದ್ದು ಗ್ರಾಮೀಣ ಭಾಗದ ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಸಹಕಾರವನ್ನು ನೀಡಿದೆ ಎಂದು ಹೇಳಿದರು.
ಸಭಾ ಅಧ್ಯಕ್ಷೆಯನ್ನು ವಹಿಸಿದ್ದ ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ ಮಾತನಾಡಿ,ಹೈನುಗಾರ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಇವೊಂದು ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗಿದೆ ಎಲ್ಲರೂ ಉತ್ತಮವಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ರೈತರು ಬೆಳೆದಾಗ ಮಾತ್ರ ಸಂಘವೂ ಅಭಿವೃದ್ಧಿ ಹೊಂದಲಿದೆ ಸದಾ ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಉಪ ವ್ಯವಸ್ಥಾಪಕ ಡಾ.ಮಾಧವ ಐತಾಳ್ ,ಕಿ.ಹಾ.ಉ.ಸ.ಸಂಘ ಕಿರಿಮಂಜೇಶ್ವರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗುಣವಂತ ನಾಯರಿ ಮತ್ತು ಉಪಾಧ್ಯಕ್ಷ ಪದ್ಮನಾಭ ಹೆಬ್ಬಾರ್,ಬೈಂದೂರು ವಲಯ ವ್ಯವಸ್ಥಾಪಕ ರಾಜಾರಾಂ, ಆಡಳಿತ ಮಂಡಳಿ ಸದಸ್ಯರಾದ ವಿಶ್ವನಾಥ್ ಹವಾಲ್ದಾರ್, ಗೋಪಾಲ ನುಕ್ಕಿತ್ತಾರು, ರಮೇಶ್ ನುಕ್ಕಿತ್ತಾರು, ರಾಮಚಂದ್ರ ನಾವಡ, ಗೋವಿಂದ ಪೂಜಾರಿ, ರೇಣುಕಾ ನಾಯರಿ,ನೀಲು, ಲಕ್ಷ್ಮೀ,ಸರೋಜಾ ಹಾಗೂ ರೈತ ಮುಖಂಡರ ಈಶ್ವರ ದೇವಾಡಿಗ, ಹಿರಿಯರಾದ ಆನಂದ ಪೂಜಾರಿ, ಹಾಲು ಉತ್ಪಾದಕ ಸದಸ್ಯರು ಉಪಸ್ಥಿತರಿದ್ದರು.ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಸುಮಂಗಲ ಕಾರಂತ ಪ್ರಾರ್ಥಿಸಿದರು .ಗೋವಿಂದ ನಾಯ್ಕ್ ನಿರೂಪಿಸಿದರು.ರತನ್ ಬಿಜೂರು ಸಹಕರಿಸಿದರು.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗುಣವಂತ ನಾಯರಿ ವಂದಿಸಿದರು.
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ಎಲೆವೆಂಶಿಯಾ 2ಕೆ24 ಫೆಸ್ಟ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.ರೋಬೊಸಾಫ್ಟ್…
ಉಡುಪಿ:ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಕಬ್ವಿನಾಲೆ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ…
ಕುಂದಾಪುರ:ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ,ಕರ್ನಾಟಕ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ…
ಮುಳ್ಳಿಕಟ್ಟೆ:ಕುಂದಾಪುರ ದಿಂದ ಅರಾಟೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಮತ್ತು ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ…
ಜನತಾ ಆವಿಷ್ಕಾರ ಕಾರ್ಯಕ್ರಮದಲ್ಲಿ ತುಂಬಿದ ವಿದ್ಯಾರ್ಥಿ ಸಮೂಹ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಹೆಮ್ಮಾಡಿ:ಜಗತ್ತು ಇಂದು ವ್ಯಾವಹಾರಿಕವಾಗಿ ಮುನ್ನಡೆಯುತ್ತಿದ್ದು.ವಿದ್ಯಾರ್ಥಿಗಳು…