ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಅಣುಕು ಯುವ ಸಂಸತ್ ಸ್ಪರ್ಧೆ

ಹೆಮ್ಮಾಡಿ:ಸಂಸದೀಯ ವ್ಯವಹಾರಗಳ ಇಲಾಖೆ,ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಹಾಗೂ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ ಅದರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪದವಿಪೂರ್ವ ವಿಭಾಗದ ಅಣುಕು ಯುವ ಸಂಸತ್ ಸ್ಪರ್ಧೆ ನಡೆಯಿತು.
ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿಗಳು ದೇಶದ ಸಂಪತ್ತಾಗಿದ್ದಾರೆ.ದೇಶ ಅಭಿವೃದ್ಧಿ ಪಥದತ್ತ ಸಾಗಲು ಯುವಕರ ಕೊಡುಗೆ ಅಪಾರ ವಾದದ,ವಿದ್ಯಾರ್ಜನೆ ಜತೆಯಲ್ಲಿ ಕೌಶಲ್ಯ ವರ್ಧಿತ ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕಾಗಿದೆ ಎಂದರು.ಅಣುಕು ಯುವ ಸಂಸತ್ ನಿಮ್ಮ ಮುಂದಿನ ಭವಿಷ್ಯಕ್ಕೆ ದಾರಿಯಲ್ಲಿ ಆಗಲಿ ಎಂದು ಶುಭ ಹಾರೈಸಿದರು.
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ,ಪದವಿ ಪೂರ್ವ ಶಿಕ್ಷಣ ಇಲಾಖೆಯ ಅತ್ಯತ್ತಮ ಕಾರ್ಯಕ್ರಮಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ಕಟ್ ಬೇಲ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕು.ವೈಶಾಲಿ,ಹೆಮ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನೇತ್ರಾವತಿ,ಕಾಲೇಜಿನ ಉಪ-ಪ್ರಾಂಶುಪಾಲ ರಮೇಶ ಪೂಜಾರಿ,ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ದಯಾನಂದ,ಬ್ರಹ್ಮಾವರ ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ವಾಸು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ವಿವಿಧ ಕಾಲೇಜುಗಳಿಂದ 40ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಸ್ಪರ್ಧೆಯಲ್ಲಿ ತೀರ್ಪುಗಾರರ ತೀರ್ಪುಗಾರಿಕೆಯ ಮೂಲಕ
5ಜನ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು.
ಬಸ್ರೂರು ಶಾರದಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧ್ರುವ ಪ್ರಥಮ ಸ್ಥಾನ,ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಸರ್ಗ ದ್ವಿತೀಯ ಸ್ಥಾನ,ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಲಕ್ಷ್ಮಿಕಾಂತ್ ತೃತೀಯ ಸ್ಥಾನ,ಗೋಳಿಯಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿನಾಯಕ ಚತುರ್ಥ ಸ್ಥಾನ,ಹಾಗೂ ಬ್ರಹ್ಮಾವರ ಎಸ್,ಎಮ್,ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಐದನೇಯ ಸ್ಥಾನ ಪಡೆದರು.ವಿಜೇತ ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಲಾಯಿತು.
ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಯಿತು.
ಕಾರ್ಯಕ್ರಮ ದಲ್ಲಿ ವಿವಿಧ ಕಾಲೇಜುಗಳಿಂದ ರಾಜ್ಯಶಾಸ್ತ್ರ ಉಪನ್ಯಾಸಕರು,ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು,ಬೋಧಕ/ಬೋಧಕೇತರ ವ್ರಂದದವರು ಉಪಸ್ಥಿತರಿದ್ದರು.
ಜನತಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ಕಾರ್ಯಕ್ರಮ ಸಂಯೋಜಕರಾದ ಉದಯ ನಾಯ್ಕ್ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿ ವಂದಿಸಿದರು.





















































































































































































































































































































































































































































































































































































































































































































































































































































































































































































































































































































































































































































































































































































































































































