ಕುಂದಾಪುರ

ವಿವೇಕ ಕೊಠಡಿ ಉದ್ಘಾಟನೆ,ಚಿಣ್ಣರ ಕಲರವ ಕಾರ್ಯಕ್ರಮ

Share

ಕುಂದಾಪುರ:ಮುಗ್ಧ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರ ಹೊಮ್ಮಿಸಿ,ಮಕ್ಕಳು ಸರ್ವತೋಮುಖವಾಗಿ ಬೆಳವಣಿಗೆ ಹೊಂದಲು ಪಾಲಕರು,ಶಿಕ್ಷಕರು,ಸಮುದಾಯದ ಪಾತ್ರ ಹಿರಿದಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಕೊಡಪಾಡಿ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿವೇಕ ಕೊಠಡಿಯನ್ನು ಉದ್ಘಾಟಿಸಿದ ಅವರು ಚಿಣ್ಣರ ಕಲರವ ಕಾರ್ಯಕ್ರಮದಲ್ಲಿ ಭಾಗವವಹಿಸಿ ಮಾತನಾಡಿದರು.
ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿದ್ದರು.ತ್ರಾಸಿ ಗ್ರಾ.ಪಂ ಅಧ್ಯಕ್ಷ ಮಿಥುನ್ ದೇವಾಡಿಗ,ಗುಜ್ಜಾಡಿ ಪಂಚಾಯಿತಿ ಉಪಾಧ್ಯಕ್ಷೆ ನಾಗರತ್ನ ಮತ್ತು ಸದಸ್ಯರಾದ ಹರೀಶ್ ಮೇಸ್ತ ಗುಜ್ಜಾಡಿ,ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ,ಸವ್ಯಸಾಚಿ ಯುವಕ ಮಂಡಲದ ಅಧ್ಯಕ್ಷ ಗುರುಪ್ರಸಾದ ಗಾಣಿಗ,ಕಾರ್ಯದರ್ಶಿ ರಾಜು ಗಾಣಿಗ,ಮಾರಿಕಾಂಬಾ ಮಹಿಳಾ ಅಧ್ಯಕ್ಷೆ ಶಾರದಾ ದೇವಾಡಿಗ,ಅಂಗನವಾಡಿ ಮೇಲ್ವಿಚಾರಕಿ ರೇಖಾ,ಎಸ್‍ಡಿಎಂಸಿ ಅಧ್ಯಕ್ಷೆ ಅನಿತಾ ಖಾರ್ವಿ,ಶಾಲಾ ನಾಯಕಿ ವೈಭವ ಉಪಸ್ಥಿತರಿದ್ದರು.ಶಿಕ್ಷಕಿ ನಯನ ಸ್ವಾಗತಿಸಿದರು.ಶಾಲಾ ಮುಖ್ಯೋಪಾಧ್ಯಾಯಿನಿ ವೀಣಾ ವರದಿ ವಾಚಿಸಿದರು,ಭಾಸ್ಕರ ಗಾಣಿಗ ನಿರೂಪಿಸಿದರು.ಶಿಕ್ಷಕಿ ಸುಶೀಲಾ ವಂದಿಸಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago