ಎಕ್ಸಲೆಂಟ್ ಕುಂದಾಪುರ:ವಾರ್ಷಿಕ ಕ್ರೀಡಾ ಕೂಟ ಉದ್ಘಾಟನೆ

Share

Advertisement
Advertisement

ಕುಂದಾಪುರ:ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಲಿಟ್ಲ್ ಸ್ಟಾರ್ ಅಂಗ್ಲ ಮಾಧ್ಯಮ ಶಾಲೆ ಸುಣ್ಣಾರಿ ಕುಂದಾಪುರ ಅದರ ಜಂಟಿ ವಾರ್ಷಿಕ,ಕ್ರೀಡಾಕೂಟ ಕಾರ್ಯಕ್ರಮ ಎಕ್ಸಲೆಂಟ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಿತು.

Advertisement

ಕುಂದಾಪುರ ಆರಕ್ಷಕ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಸಾದ್ ಕೆ ಅವರು ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ,ಕ್ರೀಡೆ ವಿದ್ಯಾರ್ಥಿಗಳಲ್ಲಿ ಆತ್ಮ ಸ್ಥೈರ್ಯವನ್ನು ತುಂಬುತ್ತದೆ. ಜೀವನದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು, ಸೋಲು-ಗೆಲುವುಗಳನ್ನು ಸಮನಾಗಿ ಸ್ವೀಕರಿಸಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂ.ಎಂ ಹೆಗ್ಡೆ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಎಮ್ .ಮಹೇಶ್ ಹೆಗ್ಡೆ ಅವರು ಮಾತನಾಡಿ,ಗ್ರಾಮೀಣ ಭಾಗದಲ್ಲಿ ಸೃಷ್ಟಿಸಿದ ವಿದ್ಯಾಸಂಸ್ಥೆ ಬೆಳೆಯುತ್ತಿರುವ ರೀತಿ ನೋಡಿದರೆ ಬಹಳ ಸಂತೋಷವಾಗುತ್ತದೆ.ಮಿನಿ ಒಲಂಪಿಕ್ ರೀತಿಯಲ್ಲಿ ಆಯೋಜನೆಗೊಂಡಿರುವ ಈ ಕ್ರೀಡಾಕೂಟ ಎಲ್ಲರಿಗೂ ಮಾದರಿಯಾಗಲಿ ಎಂದು ಶುಭಾ ಹಾರೈಸಿದರು.ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ ಶೆಟ್ಟಿ, ಲಿಟ್ಲ್ ಸ್ಟಾರ್ ಅಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಅಗಸ್ಟಿನ್ ಕೆ.ಎ ಉಪಸ್ಥಿತರಿದ್ದರು.

ಎಕ್ಸಲೆಂಟ್,ಪದವಿ ಪೂರ್ವ ಕಾಲೇಜು ಮತ್ತು ಲಿಟ್ಲ್ ಸ್ಟಾರ್ ಅಂಗ್ಲ ಮಾಧ್ಯಮ ಶಾಲೆಗಳು 1400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ಮೂಡಿ ಬಂತು.ಕ್ರೀಡಾಭಿಮಾನಿಗಳು ಧ್ವಜ ವಂದನೆಯನ್ನು ಸ್ವೀಕರಿಸಿದರು.ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.
ಎಕ್ಸಲೆಂಟ್ ಕಾಲೇಜಿನ ರಾಷ್ಟ್ರಮಟ್ಟದ ಕ್ರೀಡಾಪಟು ಮಾನಸ ಕ್ರೀಡಾ ಜ್ಯೋತಿ ಹೊತ್ತು ಸಾಗಿದರು ,ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.
ಖಜಾಂಚಿ ಭರತ್ ಶೆಟ್ಟಿ ಸ್ವಾಗತಿಸಿ ವಾಸ್ತವಿಕ ಮಾತನಾಡಿದರು.ಅಮೃತ ಭಾರತಿ ಎಜುಕೇಶನಲ್ ಟ್ರಸ್ಟ್ನ ಪಿ.ಆರ್.ಒ ವಿಜಯ್ ಕುಮಾರ್ ಶೆಟ್ಟಿ, ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ವಂದಿಸಿದರು.

Advertisement
Advertisement


Share

Leave a comment

Your email address will not be published. Required fields are marked *

You cannot copy content of this page